Thursday, June 4, 2026
Homeತಾಜಾ ಸುದ್ದಿರಾಜೀನಾಮೆ ಚರ್ಚೆಯ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ ಕೊಟ್ಟ ಸಿಎಂ ಯಡಿಯೂರಪ್ಪ

ರಾಜೀನಾಮೆ ಚರ್ಚೆಯ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ ಕೊಟ್ಟ ಸಿಎಂ ಯಡಿಯೂರಪ್ಪ

- Advertisement -
- Advertisement -

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಈಗಾಗಲೇ ಶೇ.11ರಷ್ಟು ತುಟ್ಟಿಭತ್ಯೆ ಬಿಡುಗಡೆ ಮಾಡೋದಕ್ಕೆ ಆರ್ಥಿಕ ಇಲಾಖೆಗೆ ಸೂಚಿಸುವ ಮೂಲಕ, ಸಿಎಂ ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದರು. ಇದರ ಬೆನ್ನಲ್ಲೇ, ಇಂದಿನ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯ ಸರ್ಕಾರಿ ನೌಕರರ ಕುಟುಂಬಸ್ಥರಿಗೂ ಸಂಪೂರ್ಣ ಉಚಿತ ಚಿಕಿತ್ಸೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದ್ದಾರೆ. ಈ ಮೂಲಕ ಮತ್ತೊಂದು ಭರ್ಜರಿ ಸಿಹಿಸುದ್ದಿಯನ್ನು ಸರ್ಕಾರಿ ನೌಕರರಿಗೆ ನೀಡಿದ್ದಾರೆ.

ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಈ ಸಚಿವ ಸಂಪುಟ ಸಭೆಯಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಮುಖ ಬೇಡಿಕೆಯಾದಂತ ರಾಜ್ಯ ಸರ್ಕಾರಿ ನೌಕರರು ಹಾಗೂ ಕುಟುಂಬ ಸದಸ್ಯರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುವಂತ ಆರೋಗ್ಯ ಯೋಜನೆ ಅನುಷ್ಠಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ.

ಸಿಎಂ ಯಡಿಯೂರಪ್ಪ ಅವರು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವಂತ ನಿರ್ಣಯದಿಂದಾಗಿ 6 ಲಕ್ಷ ನೌಕರರು ಹಾಗೂ ಕುಟುಂಬ ಸದಸ್ಯರು ಸೇರಿದಂತೆ ಸುಮಾರು 25 ಲಕ್ಷ ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆಯುವಂತೆ ಆಗಲಿದೆ. ಹೀಗಾಗಿ ಇಂತಹ ಮಹತ್ವದ ನಿರ್ಣಯ ಕೈಗೊಂಡ ಮುಖ್ಯಮಂತ್ರಿ ಯಡಿಯೂರಪ್ಪಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಧನ್ಯವಾದ ಸಲ್ಲಿಸಿದೆ.

- Advertisement -

Latest News

error: Content is protected !!