Friday, May 3, 2024
Homeತಾಜಾ ಸುದ್ದಿಸರ್ಕಾರಿ ಪದವಿ ಕಾಲೇಜುಗಳ 'ಅತಿಥಿ ಉಪನ್ಯಾಸಕ'ರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಯಡಿಯೂರಪ್ಪ

ಸರ್ಕಾರಿ ಪದವಿ ಕಾಲೇಜುಗಳ ‘ಅತಿಥಿ ಉಪನ್ಯಾಸಕ’ರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಯಡಿಯೂರಪ್ಪ

spot_img
- Advertisement -
- Advertisement -

ಬೆಂಗಳೂರು: ಮಾರ್ಚ್​ನಿಂದ ಅತಿಥಿ ಉಪನ್ಯಾಸಕರ ಗೌರವ ಧನ ಬಿಡುಗಡೆ ಮಾಡದೆ ಮೊಂಡುತನ ತೋರುತ್ತಿದ್ದ ರಾಜ್ಯ ಸರ್ಕಾರ, ಇದೀಗ ತನ್ನದೇ ಪಕ್ಷದ ಎಂಎಲ್ಸಿಯ ಪ್ರತಿಭಟನೆ ಬಳಿಕ ಎಚ್ಚೆತ್ತುಕೊಂಡಿದೆ. ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರಿಗೆ, ಬಾಕಿ ವೇತನವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 14,447 ಅತಿಥಿ ಉಪನ್ಯಾಸಕರಿಗೆ ಲಾಕ್ ಡೌನ್ ಕಾರಣದಿಂದ ಕಾಲೇಜು ಮುಚ್ಚಿ ಮಾರ್ಚ್ ತಿಂಗಳವರೆಗೆ ಮಾತ್ರವೇ ವೇತನ ನೀಡಲಾಗಿತ್ತು. ಇದೀಗ ಏಪ್ರಿಲ್ ನಿಂದ ಆಗಸ್ಟ್ ವರೆಗೆ ವೇತನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಅತಿಥಿ ಉಪನ್ಯಾಸಕರಿಗೆ ಕೂಡಲೇ ವೇತನ ಬಿಡುಗಡೆ ಮಾಡಿ ಎಂದು ವಿಧಾನಪರಿಷತ್ ಸದನದಲ್ಲಿ ಆಗ್ರಹಿಸಿದ್ದ ಬಿಜೆಪಿ ಎಂಎಲ್​ಸಿ ಆಯನೂರು ಮಂಜುನಾಥ್​, ರಾಜ್ಯ ಸರ್ಕಾರವನ್ನು ಹೃದಯಹೀನ ಎಂದು ಛೇಡಿಸಿದ್ದರು. ಕಳೆದ 5 ತಿಂಗಳಿಂದ ಸಂಬಳವಿಲ್ಲದೆ ಅತಿಥಿ ಉಪನ್ಯಾಸಕರು ಕಷ್ಟ-ನಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ ವೇತನ ಪಾವತಿಸಿ. ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ ಪರಿಹಾರ ನೀಡಿ ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಲು ಕಾಲಾವಕಾಶ ಬೇಕು ಎಂದು ಸಭಾನಾಯಕ ಕೋಟ ಶೀನಿವಾಸ ಪೂಜಾರಿ ಹೇಳುತ್ತಿದ್ದಂತೆ ಕೋಪಗೊಂಡ ಆಯನೂರು, ಏಕಾಂಗಿಯಾಗಿ ಸಭಾಪತಿ ಪೀಠದ ಮುಂದೆ ಪ್ರತಿಭಟನೆಗೆ ಕುಳಿತ್ತಿರು. ಇದಕ್ಕೆ ಕಾಂಗ್ರೆಸ್​ ಹಾಗೂ ಜೆಡಿಎಸ್​ ಕೂಡ ಬೆಂಬಲಿಸಿದ್ದವು.

- Advertisement -
spot_img

Latest News

error: Content is protected !!