Friday, May 17, 2024
Homeತಾಜಾ ಸುದ್ದಿಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಶಾಲೆಗೆ ಬರಲು ಶಾಲಾ...

ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಶಾಲೆಗೆ ಬರಲು ಶಾಲಾ ವಾಹನ ಖರೀದಿಗೆ ನಿರ್ಧಾರ

spot_img
- Advertisement -
- Advertisement -

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ  ರಾಜ್ಯ ಸರ್ಕಾರ ಭರ್ಜರಿ ಸುದ್ದಿಯೊಂದನ್ನು ನೀಡಿದೆ. ಶಾಲಾ ಮಕ್ಕಳನ್ನು ದೂರದ ಊರುಗಳಿಂದ ಕರೆದುಕೊಂಡು ಬರೋದಕ್ಕೆ ಶಾಲಾ ವಾಹನ ಖರೀದಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅಧಿಕೃತ ಜ್ಞಾಪನೆ ಹೊರಡಿಸಿದ್ದು, ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಪರಿಷ್ಕೃತ ಯೋಜನೆಯ ಮಾರ್ಗಸೂಚಿಗಳು 2014ರಲ್ಲಿನ ಅನುಬಂಧ-|||ರಡಿ ಈ ಕೆಳಕಂಡ ಅಂಶಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಿಗೆ ಮಾತ್ರ ಶಾಲಾ-ವಾಹನವನ್ನು ಮಕ್ಕಳನ್ನು ಕರೆತರುವ ಸಲುವಾಗಿ ಖರೀದಿಸಲು ತಗಲುವ ವೆಚ್ಚವನ್ನು ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಭರಿಸಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.

ಅಂದಹಾಗೇ ಶಾಲಾ ವಾಹನಕ್ಕೆ, ವಾಹನ ಚಾಲಕರ ವೇತನ ಹಾಗೂ ಪೆಟ್ರೋಲ್, ಡೀಸೆಲ್, ದುರಸ್ಥಿ ವೆಚ್ಚಗಳನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯು ಇತರೆ ಅನುದಾನದಡಿ ವೆಚ್ಚ ಭರಿಸುವಂತೆ ಷರತ್ತು ವಿಧಿಸಿದೆ.

- Advertisement -
spot_img

Latest News

error: Content is protected !!