Tuesday, June 9, 2026
Homeತಾಜಾ ಸುದ್ದಿರೈತ ಮಕ್ಕಳಿಗೆ ಸಿಹಿಸುದ್ದಿ ನೀಡಿದ ಕರ್ನಾಟಕ ಸರ್ಕಾರ

ರೈತ ಮಕ್ಕಳಿಗೆ ಸಿಹಿಸುದ್ದಿ ನೀಡಿದ ಕರ್ನಾಟಕ ಸರ್ಕಾರ

- Advertisement -
- Advertisement -

ವಿಜಯಪುರ : ಕರ್ನಾಟಕ ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಮಹತ್ವಾಕಾಂಕ್ಷೆಯ ಯೋಜನೆಗೆ ಸೆಪ್ಟೆಂಬರ್ 5 ರಂದು ಚಾಲನೆ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಯೋಜನೆಯಿಂದ ರಾಜ್ಯದ ರೈತರ 18 ಲಕ್ಷ ಮಕ್ಕಳಿಗೆ ಲಾಭ ದೊರೆಯಲಿದೆ. ಸರ್ಕಾರಕ್ಕೆ 1 ಸಾವಿರ ಕೋಟಿ ರೂ. ಆರ್ಥಿಕ ಹೊರೆ ಬೀಳಲಿದೆ ಎಂದರು.


ಸೆಪ್ಟೆಂಬರ್ 5 ರಂದು ಈ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಪಿಯುಸಿಯಿಂದ ಪಿಜಿ ವರೆಗೆ ಶಿಕ್ಷಣ ಪಡೆಯುತ್ತಿರುವ ಸುಮಾರು 18 ಲಕ್ಷ ರೈತರ ಮಕ್ಕಳಿಗೆ ಇದರ ಲಾಭ ದೊರೆಯಲಿದೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!