- Advertisement -
- Advertisement -
ಬೆಂಗಳೂರು: ಫೆಬ್ರುವರಿಯಿಂದ ಜುಲೈ 4 ರವರೆಗೆ ಹಾಲು ಉತ್ಪಾದಿಸುವ ರೈತರಿಗೆ ನೀಡಬೇಕಾಗಿದ್ದ ₹530 ಕೋಟಿ ಪ್ರೋತ್ಸಾಹ ಧನವನ್ನು ಸರ್ಕಾರ ಬಿಡುಗಡೆ ಮಾಡಿದೆ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮಂಗಳವಾರ ವಿವಿಧ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರ ಜತೆ ವಿಡಿಯೊ ಸಂವಾದ ನಡೆಸಿ ಈ ವಿಷಯ ತಿಳಿಸಿದರು.
ಫೆಬ್ರವರಿಯಿಂದ ಜುಲೈ 4ರ ವರೆಗೆ ಹಾಲು ಉತ್ಪಾದಕರಿಗೆ ನೀಡಬೇಕಾಗಿದ್ದ 530 ಕೋಟಿ ರೂಪಾಯಿ ಪ್ರೋತ್ಸಾಹ ಧನ ಬಿಡುಗಡೆಯಾಗಿದ್ದು ಶೀಘ್ರವೇ ರೈತರ ಖಾತೆಗಳಿಗೆ ಪಾವತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕೆಎಂಎಫ್ ನಲ್ಲಿ ಪ್ರತಿದಿನ 88 ಲಕ್ಷ ಲೀಟರ್ ಹಾಲು ಶೇಖರಣೆಯಾಗುತ್ತಿದೆ. ಕಳೆದ ವರ್ಷಕ್ಕಿಂತ 6 ಲಕ್ಷ ಲೀಟರ್ ಹೆಚ್ಚುವರಿ ಹಾಲು ಬಂದಿದೆ ಎಂದು ಹೇಳಿದ್ದಾರೆ.
- Advertisement -