- Advertisement -
- Advertisement -
ಬೆಂಗಳೂರು : ಮನೆ ಕಟ್ಟೋರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಸಾರ್ವಜನಿಕರಿಗೆ ಸುಲಭವಾಗಿ ಮರಳು ಸಿಗುವಂತೆ ಮಾಡಲು ನೂತನ ಮರಳು ನೀತಿ ಜಾರಿಗೆ ತರಲು ಸರ್ಕಾರ ತೀರ್ಮಾನಿಸಿದೆ.
ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ನೂತನ ಮರಳು ನೀತಿಗೆ ಒಪ್ಪಿಗೆ ಸಿಗುವ ಸಾಧ್ಯತೆ ಇದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮತ್ತು ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಸಂಪುಟ ಸಮಿತಿ ರಚಿಸಿ ವಿವಿಧ ರಾಜ್ಯಗಳಲ್ಲಿ ಇರುವ ಮರಳು ನೀತಿ ಬಗ್ಗೆ ಅಧ್ಯಯನ ನಡೆಸಲಾಗಿದೆ.
ಗ್ರಾಮ ಪಂಚಾಯಿತಿ ಅಥವಾ ಸರ್ಕಾರದ ಸಂಸ್ಥೆಯೊಂದರ ಮೂಲಕ ಮರಳು ಮಾರಾಟ ಮಾಡಲು ಅವಕಾಶ ನೀಡಲು ಶಿಫಾರಸು ಮಾಡಲಾಗಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ನೂತನ ಮರಳು ನೀತಿಗೆ ಒಪ್ಪಿಗೆ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
- Advertisement -