Wednesday, June 24, 2026
Homeತಾಜಾ ಸುದ್ದಿಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ; ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ

ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ; ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ

- Advertisement -
- Advertisement -

ಬೆಂಗಳೂರು : ಪೊಲೀಸ್ ಸಿಬ್ಬಂದಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಲು ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇನ್ನು ಈ ರೀತಿ ವರ್ಗಾವಣೆಗೆ ಒಂದಷ್ಟು ಷರತ್ತುಗಳಿವೆ. ಹಲವು ಷರತ್ತುಗಳೊಂದಿಗೆ ಪೊಲೀಸ್ ಸಿಬ್ಬಂದಿಯ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಲು ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಯಾವುದೇ ಒಂದು ಜಿಲ್ಲೆಯಲ್ಲಿ, ನೇಮಕಾತಿ ಹೊಂದಿದ ಹಾಗೂ ಅದೇ ಜಿಲ್ಲೆಯಲ್ಲಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ ಯಾವುದೇ ಸಿಬ್ಬಂದಿ, ಇತರೆ ಜಿಲ್ಲೆಗಳು ಅಥವಾ ತಮ್ಮ ಸ್ವಂತ ಜಿಲ್ಲೆಗೆ ವರ್ಗಾವಣೆ ಹೊಂದಲು ಅರ್ಹತೆ ಹೊಂದಿರುತ್ತಾರೆ.ಪೊಲೀಸ್ ಇಲಾಖೆಗೆ ನೇಮಕವಾದ ಹಾಗೂ ಕನಿಷ್ಠ ಮೂರು ವರ್ಷಗಳ ಸೇವೆ ಸಲ್ಲಿಸಿದ ಮಾಜಿ ಯೋಧರು ಸಹ ಬೇರೆ ಜಿಲ್ಲೆಗೆ ವರ್ಗಾವಣೆ ಕೋರಲು ಸಚಿವ ಸಂಪುಟ ಸಭೆಯಲ್ಲಿ ಅನುಮತಿ ಸಿಕ್ಕಿದೆ.ಮಾಜಿ ಯೋಧರು ಸಹ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಆಗಬಹುದು ಎಂದು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

- Advertisement -

Latest News

error: Content is protected !!