Thursday, May 2, 2024
Homeತಾಜಾ ಸುದ್ದಿಗ್ರಾಮೀಣಾಭಿವೃದ್ಧಿ ಇಲಾಖೆಯ ಸಿಬ್ಬಂದಿ ಸಿಹಿಸುದ್ದಿ ಕೊಟ್ಟ ಸಿಎಂ ಯಡಿಯೂರಪ್ಪ: ಇಲಾಖೆಯ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು...

ಗ್ರಾಮೀಣಾಭಿವೃದ್ಧಿ ಇಲಾಖೆಯ ಸಿಬ್ಬಂದಿ ಸಿಹಿಸುದ್ದಿ ಕೊಟ್ಟ ಸಿಎಂ ಯಡಿಯೂರಪ್ಪ: ಇಲಾಖೆಯ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿದ ಮುಖ್ಯಮಂತ್ರಿ

spot_img
- Advertisement -
- Advertisement -

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ, ಕಂದಾಯ ಇಲಾಖೆ ಸಿಬ್ಬಂದಿಗೆ ನೀಡುತ್ತಿರುವ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಅವರು ಇಂದು ಬೆಳಗಾವಿ, ಬಳ್ಳಾರಿ, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳ ಆಯ್ದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಪಿಡಿಓ ಗಳೊಂದಿಗೆ ಸಂವಾದ ನಡೆಸಿದ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ವಿವಿಧ ಪಂಚಾಯಿತಿ ಅಧ್ಯಕ್ಷರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು ಈ ಘೋಷಣೆ ಮಾಡಿದ್ದಾರೆ.

ಕೋವಿಡ್ 19 ಸೋಂಕಿನ 2ನೇ ಅಲೆ ಗ್ರಾಮೀಣ ಪ್ರದೇಶದಲ್ಲಿ ತೀವ್ರವಾಗಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಇಂದು ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಿಡಿಓ ಗಳೊಂದಿಗೆ ಸಂವಾದ ನಡೆಸಿ, ಸ್ಥೈರ್ಯ ಮೂಡಿಸಿದ್ದಾರೆ.

ಕೊರೋನ 2ನೇ ಅಲೆ ಮೊದಲಿಗಿಂತ ವಿಭಿನ್ನವಾಗಿದೆ. ಹೆಚ್ಚು ಹಾನಿಕಾರಕವಾಗಿದೆ. ಕೊರೋನ ಸೊಂಕು ತ್ವರಿತವಾಗಿ ವ್ಯಾಪಿಸುತ್ತಿದ್ದು ತುರ್ತು ನಿವಾರಣ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಕಳೆದ ವಾರ ಘೋಷಿಸಿದ ಪ್ಯಾಕೇಜ್‍ನಲ್ಲಿ ಎಲ್ಲಾ ಗ್ರಾಮ ಪಂಚಾಯತ್‍ಗಳಿಗೂ ಎಸ್.ಡಿ.ಆರ್.ಎಫ್ ನಿಧಿಯಿಂದ ತಲಾ ರೂ. 50,000/- ಗಳನ್ನು ಬಿಡುಗಡೆ ಮಾಡಲು ಆದೇಶಿಸಿರುತ್ತೇನೆ. ಸದ್ಯದಲ್ಲಿಯೇ ಹಣ ತಮ್ಮ ಕೈ ಸೇರಲಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಈಗಾಗಲೇ 14ನೇ ಹಣಕಾಸು ಆಯೋಗದ ಅನುದಾನದ ಉಳಿಕೆ ಹಣ, 15ನೇ ಹಣಕಾಸು ಆಯೋಗದ ಅನಿರ್ಬಂದಿತ ಅನುದಾನ ಹಾಗೂ ಗ್ರಾಮ ಪಂಚಾಯತ್ ಸ್ವಂತ ಸಂಪನ್ಮೂಲವನ್ನು ಈ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ.

- Advertisement -
spot_img

Latest News

error: Content is protected !!