Friday, June 5, 2026
Homeತಾಜಾ ಸುದ್ದಿವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಸರ್ಕಾರಿ ಶಾಲಾ ಶಿಕ್ಷಕರಿಗೆ ಇಲ್ಲಿದೆ ಗುಡ್ ನ್ಯೂಸ್

ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಸರ್ಕಾರಿ ಶಾಲಾ ಶಿಕ್ಷಕರಿಗೆ ಇಲ್ಲಿದೆ ಗುಡ್ ನ್ಯೂಸ್

- Advertisement -
- Advertisement -

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದ್ದು, ವರ್ಗಾವಣೆ ವೇಳಾಪಟ್ಟಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎನ್ನಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ಶಿಕ್ಷಕರ ವರ್ಗಾವಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದರೂ ಚುನಾವಣೆ ನೀತಿ ಸಂಹಿತೆಯಿಂದಾಗಿ ಪ್ರಕ್ರಿಯೆ ಆರಂಭಿಸಲು ಸಾಧ್ಯವಾಗಿರಲಿಲ್ಲ. ನಿನ್ನೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ನಿನ್ನೆಯಿಂದಲೇ ಚುನಾವಣಾ ನೀತಿ ಸಂಹಿತೆ ತೆರವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ನವೆಂಬರ್ 18 ರಿಂದ ಆರಂಭಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನು ಶಿಕ್ಷಕರ ವರ್ಗಾವಣೆಗೆ ಸಂಬಂಧ ಶಿಕ್ಷಕ ಮಿತ್ರ ಆಯಪ್ ನಲ್ಲಿ ಮಾಹಿತಿ ಅಪ್ ಲೋಡ್ ಜೊತೆಗೆ ಶಿಕ್ಷಕರ ಸೇವಾ ಮಾಹಿತಿ ಹಾಗೂ ಹೆಚ್ಚುವರಿ ಶಿಕ್ಷಕರ ಪಟ್ಟಿ ಇತ್ಯಾದಿಗಳನ್ನು ಇಲಾಖೆ ಸಿದ್ಧಪಡಿಸಿಕೊಂಡಿದೆ ಎನ್ನಲಾಗಿದೆ.

- Advertisement -

Latest News

error: Content is protected !!