Thursday, May 16, 2024
Homeತಾಜಾ ಸುದ್ದಿವಾಹನ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಸಿಕ್ತು ಸಿಹಿ ಸುದ್ದಿ..

ವಾಹನ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಸಿಕ್ತು ಸಿಹಿ ಸುದ್ದಿ..

spot_img
- Advertisement -
- Advertisement -

ಬೆಂಗಳೂರು : ಮೋಟಾರು ವಾಹನಗಳ ತೆರಿಗೆಯನ್ನು ಇಳಿಸಬೇಕೆಂದು ರಾಜ್ಯ ಸರ್ಕಾರಕ್ಕೆ  ಹಲವಾರು ವಾಹನ ಮಾಲೀಕರು, ವಿವಿಧ ಸಂಘಟನೆಗಳು ಸಲ್ಲಿಸಿದ್ದ ಬೇಡಿಕೆ ಕೊನೆಗೂ ಈಡೇರಿದೆ. ರಾಜ್ಯ ಸರ್ಕಾರದಿಂದ ಬಾಡಿಗೆ ರೂಪದಲ್ಲಿ ಗಾಡಿಗಳನ್ನು ನೀಡುವ ವಾಹನಗಳನ್ನು ನೀಡುವ ವಾಹನ ಮಾಲೀಕರಿಗೆ ಭರ್ಜರಿ ಸುದ್ದಿಯೊಂದನ್ನು ನೀಡಿದೆ.

ರಾಜ್ಯದಲ್ಲಿನ 13 ರಿಂದ 20 ಆಸನ ಸಾಮರ್ಥ್ಯವುಳ್ಳ ಒಪ್ಪಂದದ ವಾಹನಗಳಿಗೆ, ಪ್ರತಿ ಆಸನಕ್ಕೆ ನಿಗಧಿ ಪಡಿಸಲಾಗಿದ್ದಂತ ರೂ.900 ಮೋಟಾರು ವಾಹನ ತೆರಿಗೆಯನ್ನು ಇಳಿಕೆ ಮಾಡಿದೆ. ರೂ.900ರಿಂದ ರೂ.700ಕ್ಕೆ ಇಳಿಕೆ ಮಾಡಿ ಆದೇಶಿಸಿಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಕರ್ನಾಟಕ ಮೋಟಾರು ವಾಹನಗಳ ತೆರಿಗೆ ಅಧಿನಿಯಮ 1957 ( ಕರ್ನಾಟಕ ಕಾಯ್ದೆ 35/1957) ಕಲಂ 16(1) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಮೋಟಾರು ವಾಹನಗಳ ಅಧಿನಿಯಮ 1957ರ ಷೆಡ್ಯೂಲ್ (ಎ) ಐಟಂ ಸಂಖ್ಯೆ: 5(ಎ)(iii) ರಂತೆ ರಾಜ್ಯದಲ್ಲಿನ 13 ರಿಂದ 20 ಆಸನ ಸಾಮರ್ಥ್ಯವುಳ್ಳ ಒಪ್ಪಂದ ವಾಹನಗಳಿಗೆ ಪ್ರತಿ ಆಸನಕ್ಕೆ ನಿಗದಿಪಡಿಸಿರುವ ರೂ. 900/- ಗಳ ಮೋಟಾರು ವಾಹನ ತೆರಿಗೆಯನ್ನು ರೂ. 700/- ಗಳಿಗೆ ಇಳಿಸಲಾಗಿದೆ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!