Saturday, April 27, 2024
Homeತಾಜಾ ಸುದ್ದಿಮತ್ತೆ ಒಂದಾದ ಪ್ರಭಾಸ್‌ – ಅನುಷ್ಕಾ: ಬಾಹುಬಲಿ ಜೋಡಿಯಿಂದ ಸಿಕ್ತು ಸಿಹಿಸುದ್ದಿ

ಮತ್ತೆ ಒಂದಾದ ಪ್ರಭಾಸ್‌ – ಅನುಷ್ಕಾ: ಬಾಹುಬಲಿ ಜೋಡಿಯಿಂದ ಸಿಕ್ತು ಸಿಹಿಸುದ್ದಿ

spot_img
- Advertisement -
- Advertisement -

ಹೈದರಾಬಾದ್: ‘ಬಾಹುಬಲಿ’ ಖ್ಯಾತಿಯ ತೆಲುಗು ನಟ ಪ್ರಭಾಸ್ -ಅನುಷ್ಕಾ ಶೆಟ್ಟಿ ಜೋಡಿ ಮತ್ತೆ ಜೊತೆಯಾಗಿ ಅಭಿನಯಿಸಲಿದ್ದಾರೆ.

ಟಾಲಿವುಡ್ ಅಂಗಳದಲ್ಲಿ ‘ಬಾಹುಬಲಿ’ ಸಿನಿಮಾ ಎಂದ ಕೂಡಲೇ ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ಹೆಸರು ನೆನಪಾಗುತ್ತದೆ. ಸಿನಿಮಾಗೆ ಸಂಬಂಧಿಸಿದ ಸುದ್ದಿ ಮಾತ್ರವಲ್ಲ, ಅವರ ವೈಯಕ್ತಿಕ ಜೀವನದ ಬಗ್ಗೆಯೂ ಸಾಕಷ್ಟು ವದಂತಿಗಳು ಹರಿದಾಡಿದ್ದವು. ಈ ಜೋಡಿ ಮದುವೆ ಆಗಲಿದ್ದಾರೆ ಎಂದು ಮಾತುಗಳು ಕೇಳಿಬಂದಿದ್ದವು.

ಸದ್ಯ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾ‌’ ಚಿತ್ರೀಕರಣದಲ್ಲಿ ಪ್ರಭಾಸ್ ಬ್ಯುಸಿಯಾಗಿದ್ದಾರೆ. ಆದರೆ, ಅನುಷ್ಕಾ ಶೆಟ್ಟಿ ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಇದೀಗ ಈ ಜೋಡಿ ಮತ್ತೆ ಒಂದಾಗಿ ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯದಲ್ಲೇ ಅಧಿಕೃತ ಘೋಷಣೆ ಕೂಡ ಆಗಲಿದೆ ಎಂದು ವರದಿಯಾಗಿದೆ.

ನಿರ್ದೇಶಕ ಮಾರುತಿ ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದು, ಈ ಸಿನಿಮಾದಲ್ಲಿ ಪ್ರಭಾಸ್ ನಾಯಕನಾದರೆ, ಅನುಷ್ಕಾ ಶೆಟ್ಟಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರು ಈಗಾಗಲೇ ಇಬ್ಬರಿಗೂ ಸಿನಿಮಾದ ಕಥೆಯನ್ನು ಹೇಳಿದ್ದಾರೆ. ಈ ಚಿತ್ರದಲ್ಲಿ ನಟಿಸಲು ಈ ಜೋಡಿ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!