Sunday, June 28, 2026
Homeಕರಾವಳಿಮಂಗಳೂರುಬಂಟ್ವಾಳ; ಪಾಣೆಮಂಗಳೂರಿನಲ್ಲಿ ಕಾರಿಗೆ ಗೂಡ್ಸ್ ಲಾರಿ ಡಿಕ್ಕಿ; ಮೂವರಿಗೆ ಗಂಭೀರ ಗಾಯ

ಬಂಟ್ವಾಳ; ಪಾಣೆಮಂಗಳೂರಿನಲ್ಲಿ ಕಾರಿಗೆ ಗೂಡ್ಸ್ ಲಾರಿ ಡಿಕ್ಕಿ; ಮೂವರಿಗೆ ಗಂಭೀರ ಗಾಯ

- Advertisement -
- Advertisement -

ಬಂಟ್ವಾಳ; ಕಾರಿಗೆ ಗೂಡ್ಸ್ ಲಾರಿ ಡಿಕ್ಕಿ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಪಾಣೆಮಂಗಳೂರಿನಲ್ಲಿ ನಡೆದಿದೆ.

ಪುತ್ತೂರು ನಿವಾಸಿಯಾಗಿರುವ ಹರಿಪ್ರಸಾದ್ ಹಾಗೂ ಇಬ್ಬರು ಕಾರಿನಲ್ಲಿ ಮಂಗಳೂರಿನತ್ತ ಪ್ರಯಾಣಿಸುತ್ತಿದ್ದರು.ಈ ವೇಳೆ ಪಾಣೆಮಂಗಳೂರು ಬರುತ್ತಿದ್ದಂತೆ  ಎದುರಿನಿಂದ ವೇಗವಾಗಿ ಬಂದ ಗೂಡ್ಸ್ ಲಾರಿ ನಿಯಂತ್ರಣ ತಪ್ಪಿ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಲಾರಿ ಚಾಲಕ ಅಂದಯ್ಯ ಹಿರೇಮಠ ಅವರ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹರಿಪ್ರಸಾದ್‌ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.

- Advertisement -

Latest News

error: Content is protected !!