- Advertisement -
![]()
- Advertisement -
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿ ಪರಿಸರದ ಕೆಂಪಳ್ಳ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಗೂಡ್ಸ್ ಟೆಂಪೊವೊಂದು ಪಲ್ಟಿ ಹೊಡೆದು ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿ ಹೊಡೆದ ಘಟನೆ ಶುಕ್ರವಾರ ಸಂಭವಿಸಿದೆ.
ಘಟನೆಯಿಂದ ಟೆಂಪೊ ಚಾಲಕ ಗಾಯಗೊಂಡಿದ್ದು, ಬಸ್ಸಿನ ಮುಂಭಾಗ ಜಖಂಗೊಂಡಿದೆ. ಘಟನ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -


