Saturday, November 21, 2026
Homeಕರಾವಳಿಉಡುಪಿಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾದ ಗೂಡ್ಸ್ ವಾಹನ; ಚಾಲಕ ಸ್ಥಳದಲ್ಲೇ ಮೃತ್ಯು; ಕೂಲಿ ಕಾರ್ಮಿಕರಿಗೆ...

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾದ ಗೂಡ್ಸ್ ವಾಹನ; ಚಾಲಕ ಸ್ಥಳದಲ್ಲೇ ಮೃತ್ಯು; ಕೂಲಿ ಕಾರ್ಮಿಕರಿಗೆ ಸಣ್ಣ ಪುಟ್ಟ ಗಾಯ

- Advertisement -
- Advertisement -

ಅಜೆಕಾರು: ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ಮರಕ್ಕೆ ಢಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಅಂಡಾರು ಕೊಂದಲ್ಕೆ ಎಂಬಲ್ಲಿ ಶನಿವಾರ (ನ.21) ನಡೆದಿದೆ.

ಅಪಘಾತದಲ್ಲಿ ಕಡ್ತಲ ನಿವಾಸಿ ಸೀತಾರಾಮ ರೈ (60) ಮೃತಪಟ್ಟಿದ್ದಾರೆ. ವಾಹನದಲ್ಲಿದ್ದ ಕೂಲಿ ಕಾರ್ಮಿಕರಾದ ವಸಂತಿ, ಲೀಲಾವತಿ, ಶಾಲಿನಿ, ಶೋಭಾ ಹಾಗೂ ಪ್ರೇಮ ಎಂಬವರಿಗೆ ಗಾಯಗಳಾಗಿದ್ದು, ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಂಡಾರಿನಿಂದ ಕಾಡುಹೊಳೆ ಮಾರ್ಗವಾಗಿ ಕಡ್ತಲದ ಹಪ್ಪನಡ್ಕದ ಸದಾನಂದ ಶೆಟ್ಟಿ ಅವರ ಅಡಿಕೆ ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ವಾಹನ ಚಾಲನೆ ಮಾಡುತ್ತಿದ್ದಾಗ ಸೀತಾರಾಮ ರೈ ಅವರಿಗೆ ಹೃದಯಾಘಾತವಾಗಿದ್ದು, ಇದರಿಂದ ವಾಹನದ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿರಬಹುದು ಎಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಅಜೆಕಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!