Saturday, October 17, 2026
Homeಕರಾವಳಿಮಂಗಳೂರು : ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ: ಮಂಗಳೂರಿನ ಇಬ್ಬರ ಮೇಲೆ ಗೂಂಡಾ ಕಾಯಿದೆ ಜಾರಿ

ಮಂಗಳೂರು : ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ: ಮಂಗಳೂರಿನ ಇಬ್ಬರ ಮೇಲೆ ಗೂಂಡಾ ಕಾಯಿದೆ ಜಾರಿ

- Advertisement -
- Advertisement -

ಮಂಗಳೂರು: ಕೋಳಿ ಅಂಗಡಿಯೊಂದರ ಸಿಬ್ಬಂದಿ‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಜಾರಿಯಾಗಿದೆ.

ವೆಲೆನ್ಸಿಯಾ ಜಂಕ್ಷನ್‌ನಲ್ಲಿರುವ ಕೋಳಿ ಅಂಗಡಿಯೊಂದರ ಸಿಬ್ಬಂದಿಯ ಮೇಲೆ ಮಾರಣಾಂತಿಕ‌ ಹಲ್ಲೆ ಮಾಡಲಾಗಿತ್ತು. ಈ
ಆರೋಪಿಗಳಾದ ಜಲ್ಲಿಗುಡ್ಡೆ ಬಜಾಲ್‌ನ ನಿವಾಸಿ ಪ್ರೀತಂ ಪೂಜಾರಿ (26) ಮತ್ತು ಯೆಕ್ಕೂರಿನ ನಿವಾಸಿ ಧೀರು ಯಾನೆ ಧೀರಜ್ ಕುಮಾರ್ (27) ಹಲ್ಲೆ ಮಾಡಿದ್ದರು. ಇವರ ವಿರುದ್ಧ ಕೊಲೆ ಯತ್ನ, ಅಪಹರಣ, ಕ್ರಿಮಿನಲ್ ಸಂಚು ಸೇರಿದಂತೆ ಹಲವು ಪ್ರಕರಣಗಳು‌ ದಾಖಲಾಗಿವೆ.

ಆರೋಪಿಗಳಿಬ್ಬರೂ ಸಮಾಜಕ್ಕೆ ಅಪಾಯಕಾರಿ ಎಂದು ಪರಿಗಣಿಸಲಾಗಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಅವರ ಮೇಲೆ ಗೂಂಡಾ ಕಾಯಿದೆಯನ್ನು ಜಾರಿ‌ ಮಾಡಲಾಗಿದೆ ಎಂದು ಕಂಕನಾಡಿ ಪೊಲೀಸರು ತಿಳಿಸಿದ್ದಾರೆ

- Advertisement -

Latest News

error: Content is protected !!