Tuesday, May 7, 2024
Homeಕರಾವಳಿಕಟೀಲು ದುರ್ಗಾಪರಮೇಶ್ವರಿ ದೇವಿ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

ಕಟೀಲು ದುರ್ಗಾಪರಮೇಶ್ವರಿ ದೇವಿ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

spot_img
- Advertisement -
- Advertisement -

ಮಂಗಳೂರು: ಘನತವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಸಂಜೆ ಕಟೀಲು ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದರು.

ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ರಾಜ್ಯಪಾಲರು ಬಳಿಕ ಕಟೀಲಿಗೆ ತೆರಳಿ ದೇವಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದಕ್ಷಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಮತ್ತು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!