Sunday, May 12, 2024
Homeತಾಜಾ ಸುದ್ದಿರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ : ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ : ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬಂದಿದ್ದು, ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ಕಾಯ್ದೆಯನ್ನು ಜಾರಿಗೊಳಿಸಿದೆ.

ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಕಳೆದ ವಾರ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡಿತ್ತು.‌

ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೊಳಿಸುವ ಸಚಿವ ಸಂಪುಟದ ನಿರ್ಧಾರಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಗೆಜೆಟ್ ನೋಟಿಫಿಕೇಶನ್ ಹೊರಡಿಸಲಾಗಿದೆ.

ಕಳೆದ ಬೆಳಗಾವಿ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕಕ್ಕೆ ರಾಜ್ಯ ಸರ್ಕಾರ ಅಂಗೀಕಾರ ಪಡೆದಿತ್ತು. ಆದರೆ ವಿಧಾನ ಪರಿಷತ್ ನಲ್ಲಿ ಸಂಖ್ಯಾಬಲದ ಕೊರತೆಯ ಕಾರಣದಿಂದ ವಿಧೇಯಕ ಮಂಡಿಸಿರಲಿಲ್ಲ. ಹೀಗಾಗಿ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿತ್ತು.

ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೆ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತಲ್ಲದೇ ಆರ್ಚ್ ಬಿಷಪ್ ನೇತೃತ್ವದಲ್ಲಿ ಸುಗ್ರೀವಾಜ್ಞೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೂ ಮನವಿ ಸಲ್ಲಿಸಲಾಗಿತ್ತು.

- Advertisement -
spot_img

Latest News

error: Content is protected !!