Sunday, June 7, 2026
Homeಕರಾವಳಿಉಡುಪಿಮಂಗಳೂರಿಗೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್: ಏರ್ ಪೋರ್ಟ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ...

ಮಂಗಳೂರಿಗೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್: ಏರ್ ಪೋರ್ಟ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಸ್ವಾಗತ

- Advertisement -
- Advertisement -

ಮಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ಇಂದು ಬೆಳಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಕೇಂದ್ರ ಸಚಿವೆ ಮತ್ತು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದಾಜ್ಲೆ ಕೂಡಾ ರಾಜ್ಯಪಾಲರೊಂದಿಗೆ ಆಗಮಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ರಾಜ್ಯಪಾಲರನ್ನು ವಿಮಾನ‌ನಿಲ್ದಾಣದಲ್ಲಿ ಸ್ವಾಗತಿಸಿದರು.

ಮಂಗಳೂರು ನಗರ ಪೋಲಿಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ನಂತರ ರಾಜ್ಯಪಾಲರು ರಸ್ತೆ ಮಾರ್ಗವಾಗಿ ಮಂಗಳೂರಿನಿಂದ ಉಡುಪಿಗೆ ತೆರಳಿದರು.

- Advertisement -

Latest News

error: Content is protected !!