Monday, June 8, 2026
Homeತಾಜಾ ಸುದ್ದಿಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ರೂ  ಗೌರವಧನ ನೀಡಲು ಸರ್ಕಾರದ ಒಪ್ಪಿಗೆ; ಸರ್ಕಾರದ ಭರವಸೆ...

ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ರೂ  ಗೌರವಧನ ನೀಡಲು ಸರ್ಕಾರದ ಒಪ್ಪಿಗೆ; ಸರ್ಕಾರದ ಭರವಸೆ ಬೆನ್ನಲ್ಲೇ ಪ್ರತಿಭಟನೆ ಕೈ ಬಿಟ್ಟ ಆಶಾ ಕಾರ್ಯಕರ್ತೆಯರು

- Advertisement -
- Advertisement -

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗಿನ ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ. ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು  ತಿಂಗಳಿಗೆ ನೀಡಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.

ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ  ಪ್ರತಿ ತಿಂಗಳು ಸಿಗುವ ರಜೆ ಕ್ರೋಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ  ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು. ಅಲ್ಲದೇ ಆಯವ್ಯಯ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ  ಸಭೆ ನಡೆಸಲಾಗುವುದು. ಸರ್ಕಾರ ನಿಮ್ಮೊಂದಿಗಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.ಹೋರಾಟ ಮಾಡುವುದು ಸಂವಿಧಾನ ಬದ್ಧ ಹಕ್ಕು. ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

- Advertisement -

Latest News

error: Content is protected !!