Wednesday, May 15, 2024
Homeತಾಜಾ ಸುದ್ದಿಕಾಶಿ ಯಾತ್ರೆಗೆ ಅಂತಿಮ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಸರ್ಕಾರದಿಂದ ಅಧಿಕೃತ ಆದೇಶ

ಕಾಶಿ ಯಾತ್ರೆಗೆ ಅಂತಿಮ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಸರ್ಕಾರದಿಂದ ಅಧಿಕೃತ ಆದೇಶ

spot_img
- Advertisement -
- Advertisement -

ರಾಜ್ಯದ ಜನರು ಕಾಶಿ ಕಾರೀಡಾರ್‌ಗೆ ಭೇಟಿ ನೀಡುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ʼಕಾಶಿ ಯಾತ್ರೆʼಗೆ ಮಾರ್ಗಸೂಚಿ ಅಂತಿಮಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ, “ಕಾಶಿಯ ಭವ್ಯತೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ಮುತುವರ್ಜಿಯಿಂದ ಅಭಿವೃದ್ಧಿಗೊಳಿಸಲಾಗಿದೆ. ಕಾಶಿ ಯಾತ್ರೆ ಬಹಳಷ್ಟು ಜನರ ಜೀವನದ ಅಭಿಲಾಷೆಯಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಯೋಜನೆಯನ್ನು ಪ್ರಾರಂಭಿಸಿದೆ” ಎಂದು ತಿಳಿಸಿದ್ದಾರೆ.

“ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂಗಳಂತೆ ಸಹಾಯಧನ ನೀಡಲಾಗುತ್ತಿದೆ. ಏಪ್ರಿಲ್‌ 1, 2022ಕ್ಕೆ ಪೂರ್ವಾನ್ವಯವಾಗುವಂತೆ ಈ ಆದೇಶ ಹೊರಡಿಸಲಾಗಿದ್ದು, ಸೂಕ್ತ ದಾಖಲೆಯೊಂದಿಗೆ ಜನರು ಸದುಪಯೋಗ ಪಡೆದುಕೊಳ್ಳಬಹುದು” ಎಂದು ವಿವರಿಸಿದ್ದಾರೆ.

ಮಾರ್ಗಸೂಚಿಯ ಅಂಶಗಳು:

1. ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಅರ್ಹ ಯಾತ್ರಾರ್ಥಿಗಳಿಗೆ ತಲಾ ಐದು ಸಾವಿರ ರೂ. ಸಹಾಯ ಧನ.

2. ಕರ್ನಾಟಕದ ಖಾಯಂ ನಿವಾಸಿಗಳು ಮಾತ್ರ ಈ ಧನ ಸಹಾಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

3. ರಾಜ್ಯ ಚುನಾವಣಾ ಆಯೋಗ ನೀಡಿರುವ ʼಗುರುತಿನ ಚೀಟಿ’ ಅಥವಾ ಆಧಾರ್‌ ಕಾರ್ಡ್‌ ಇಲ್ಲವೇ ರೇಷನ್ ಕಾರ್ಡ್ ಯಾವುದಾದರೂ ಒಂದು ದಾಖಲೆ ಕಡ್ಡಾಯವಾಗಿ ಒದಗಿಸಬಹುದು.

4. ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್‌ 1 ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು, 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆ ಹಾಜರುಪಡಿಸುವುದು.

5. ಏಪ್ರಿಲ್‌ 01 2022 ರಿಂದ ಜೂನ್‌ 30, 2022 ರವರೆಗೆ ಕಾಶಿ ವಿಶ್ವನಾಥ ಸ್ವಾಮಿಯ ದರ್ಶನಕ್ಕೆ ತೆರಳಿದ ಯಾತ್ರಾರ್ಥಿಗಳು ಸಂಬಂಧಿಸಿದ ದಾಖಲಾತಿ (ಕಾಶಿ ವಿಶ್ವನಾಥ ಸ್ವಾಮಿ ದೇವಾಲಯಕ್ಕೆ ತೆರಳಲು ಮುಂಗಡವಾಗಿ ಕಾಯ್ದಿರಿಸಿದ ಮತ್ತು ಹಿಂದಿರುಗಿದ ಬಗ್ಗೆ ಕಾಯ್ದಿರಿಸಿದ ಟಿಕೇಟ್, ಛಾಯಾಚಿತ್ರ ಪೂಜಾ ರಶೀದಿ, ಅಥವಾ ದೇವಾಲಯಕ್ಕೆ ತೆರಳಿ ಮರಳಿದ ಬಗ್ಗೆ ಯಾವುದಾದರೂ ಇತರೆ ದಾಖಲೆ)ಗಳನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಕಚೇರಿಗೆ ಸಲ್ಲಿಸತಕ್ಕದ್ದು.

6. 2022 ಜುಲೈ 1ರಿಂದ ಅನ್ವಯವಾಗುವಂತೆ ಯಾತ್ರಾರ್ಥಿಗಳು ಕಾಶಿ ಯಾತ್ರೆ ಕೈಗೊಂಡಿರುವ ಬಗ್ಗೆ ಸಂಬಂಧಿಸಿದ ದಾಖಲೆಗಳನ್ನು ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಛತ್ರ, ವಾರಣಾಸಿ ಇವರ ಕಚೇರಿಯಿಂದ ಬಯೋಮೆಟ್ರಿಕ್‌ ದೃಢೀಕರಣದೊಂದಿಗೆ, ಆನ್‌ಲೈನ್‌ ಅಥವಾ ಮುದ್ಧಾಂ/ನೊಂದಾಯಿತ ಅಂಚೆ ಮೂಲಕ, ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಇವರ ಕಚೇರಿಗೆ ಸಲ್ಲಿಸತಕ್ಕದ್ದು.

7. ವ್ಯವಸ್ಥಾಪಕರು ಕರ್ನಾಟಕ ರಾಜ್ಯ ಛತ್ರ, ವಾರಣಾಸಿ ಇವರ ದೃಢೀಕರಣ ಇಲ್ಲದಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

8. ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ, ಅದೇ ವ್ಯಕ್ತಿಗೆ ಎರಡನೇ ಬಾರಿ ಅನುದಾನ ನೀಡಲು ಪರಿಗಣಿಸಲಾಗು

- Advertisement -
spot_img

Latest News

error: Content is protected !!