Wednesday, June 24, 2026
Homeಕರಾವಳಿಧರ್ಮಸ್ಥಳ ಪ್ರಕರಣ ಕುರಿತು ಇಂದು ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದ ಉತ್ತರ

ಧರ್ಮಸ್ಥಳ ಪ್ರಕರಣ ಕುರಿತು ಇಂದು ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದ ಉತ್ತರ

- Advertisement -
- Advertisement -

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಬಗ್ಗೆ ವಿಧಾನಸಭೆಯಲ್ಲಿ ನಡೆದಿದ್ದ ಚರ್ಚೆಗೆ ಇಂದು ರಾಜ್ಯ ಸರ್ಕಾರ ಉತ್ತರ ನೀಡಲಿದೆ.ವಿಪಕ್ಷ ಬಿಜೆಪಿ ನೀಡಿದ್ದ ನಿಲುವಳಿ ಸೂಚನೆಯ ಹಿನ್ನೆಲೆಯಲ್ಲಿ ನಿಯಮ 69ರ ಅಡಿಯಲ್ಲಿ ವಿಧಾನಸಭೆಯಲ್ಲಿ ಧರ್ಮಸ್ಥಳಕ್ಕೆ ಅಪಪ್ರಚಾರ ಎಸಗಲಾಗುತ್ತಿದೆ ಎಂದು ಕಳೆದ ಗುರುವಾರ ಚರ್ಚೆ ನಡೆದಿತ್ತು.

ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳ ಶಾಸಕರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಇಂದು ಮಧ್ಯಾಹ್ನದ ಬಳಿಕ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಚರ್ಚೆಗೆ ರಾಜ್ಯ ಸರ್ಕಾರದ ಉತ್ತರವನ್ನು ನೀಡಲಿದ್ದಾರೆ. ಎಸ್ಐಟಿ ವರದಿ ಮತ್ತು ಶೋಧ ಕಾರ್ಯ ಮುಂದುವರಿಕೆ ಬಗ್ಗೆ ರಾಜ್ಯ ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎಂಬುದು ಕುತೂಹಲ ಕೆರಳಿಸಿದೆ.

- Advertisement -

Latest News

error: Content is protected !!