Wednesday, June 3, 2026
HomeUncategorizedಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ  ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ  ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

- Advertisement -
- Advertisement -

ಬೆಳ್ತಂಗಡಿ : ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ  ನಾದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರ 9 ಕೋಟಿ ಅನುದಾನ ಮಂಜೂರು ಗೊಳಿಸಿದೆ.

ಜೂ.11 ರಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಸಚಿವರಾದ ಎಚ್ ಕೆ ಪಾಟೀಲ್  ರವರನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು  ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ,ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಹಾಗೂ ಅನುದಾನಕ್ಕೆ ಸಹಕರಿಸಿದ  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ, ಅಪಾರ ಸರ್ಕಾರಿ ವಕೀಲರಾದ ಮನೋಹರ್ ಕುಮಾರ್ ಎ ,ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕ್ಕಡ, ಹಿರಿಯ ವಕೀಲರ ಸಮಿತಿಯ  ಅಧ್ಯಕ್ಷರಾದ ಆಲೋಸಿಸ್ ಲೋಬೊ, ವಕೀಲರಾದ ಪ್ರಶಾಂತ್, ಉಪಸ್ಥಿತರಿದ್ದರು.

- Advertisement -

Latest News

error: Content is protected !!