Wednesday, July 15, 2026
Homeತಾಜಾ ಸುದ್ದಿಡ್ರಗ್ಸ್ ಹಾವಳಿ ತಡೆಗೆ ಟಾಸ್ಕ್ ಫೋರ್ಸ್ ರಚಿಸಿ ರಾಜ್ಯ ಸರ್ಕಾರ ಆದೇಶ

ಡ್ರಗ್ಸ್ ಹಾವಳಿ ತಡೆಗೆ ಟಾಸ್ಕ್ ಫೋರ್ಸ್ ರಚಿಸಿ ರಾಜ್ಯ ಸರ್ಕಾರ ಆದೇಶ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಲು ರಾಜ್ಯ ಸರ್ಕಾರ ಟಾಸ್ಕ್ ಫೋರ್ಸ್ ರಚಿಸಿ ಆದೇಶ ಹೊರಡಿಸಿದೆ.ಆರು ಜನ ಸಚಿವರನ್ನೊಳಗೊಂಡ ಟಾಸ್ಕ್ ಫೋರ್ಸ್ ಅಧ್ಯಕ್ಷರಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ನೇಮಕ ಮಾಡಲಾಗಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸಮಿತಿಯ ಸದಸ್ಯರಾಗಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತಿಂಗಳಿಗೊಮ್ಮೆ ಸಭೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಸ್ಕ್ ಫೋರ್ಸ್ ಗೆ ಸೂಚನೆ ನೀಡಿದ್ದಾರೆ.

ಇದೇ ವೇಳೆ, ಡ್ರಗ್ಸ್ ತಡೆಗೆ ಕಾಯ್ದೆಗೆ ಅಗತ್ಯ ತಿದ್ದುಪಡಿ ತರಲು ಕೂಡಾ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

Latest News

error: Content is protected !!