Thursday, June 4, 2026
Homeಕರಾವಳಿಮೇ 20 ರಂದು ಗ್ರಾ.ಪಂ. ಉಪಚುನಾವಣೆ ಹಿನ್ನೆಲೆ: ಅರ್ಹ ಮತದಾರ ನೌಕರರಿಗೆ ರಾಜ್ಯ ಸರ್ಕಾರದಿಂದ ರಜೆ...

ಮೇ 20 ರಂದು ಗ್ರಾ.ಪಂ. ಉಪಚುನಾವಣೆ ಹಿನ್ನೆಲೆ: ಅರ್ಹ ಮತದಾರ ನೌಕರರಿಗೆ ರಾಜ್ಯ ಸರ್ಕಾರದಿಂದ ರಜೆ ಘೋಷಣೆ

- Advertisement -
- Advertisement -

ಬೆಂಗಳೂರು: ಮೇ 20 ರಂದು ಅವಧಿ ಮುಕ್ತಾಯವಾಗಿರುವ ಗ್ರಾಮ ಪಂಚಾಯತ್ ಗಳಿಗೆ ಸಾರ್ವತ್ರಿಕ ಚುನಾವಣೆ ಮತ್ತು ಗ್ರಾಮ ಪಂಚಾಯತ್ ಗಳಲ್ಲಿ ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಅರ್ಹ ಮತದಾರ ನೌಕರರಿಗೆ ರಜೆ ಘೋಷಣೆ ಮಾಡಲಾಗಿದೆ.

ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿನ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರಿ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕ್ ಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು, ಸಹಕಾರಿ ರಂಗದ ಸಂಘ ಸಂಸ್ಥೆಗಳು, ಎಲ್ಲಾ ವ್ಯಾವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳಲ್ಲಿ ಖಾಯಂ ಮತ್ತು ದಿನಗೂಲಿ ನೌಕರರಾಗಿರುವ ಮತದಾರ ನೌಕರರಿಗೆ ರಜೆ ಘೋಷಣೆ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಮಂಗಳೂರು ತಾಲೂಕಿನ ಮುಚ್ಚೂರು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮ ಪಂಚಾಯತ್ ಮತ್ತು ಉಡುಪಿ ತಾಲೂಕಿನ ಅಲೆವೂರು ಗ್ರಾಮ ಪಂಚಾಯತ್ ಗಳ ತಲಾ ಒಂದು ಸ್ಥಾನಗಳಿಗೆ ಉಪ ಚುನಾವಣೆ ನಡೆಯುತ್ತಿದೆ.

ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಮತ್ತು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ರಜೆ ಅನ್ವಯವಾಗುವುದಿಲ್ಲ.

- Advertisement -

Latest News

error: Content is protected !!