- Advertisement -
- Advertisement -
ಬೆಂಗಳೂರು: ಕುಂದಾಪುರದಲ್ಲಿ ಪತ್ರಕರ್ತನ ಮೇಲೆ ಸರ್ಕಾರಿ ವೈದ್ಯ ಹಲ್ಲೆ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಸಚಿವ ಯು.ಟಿ. ಖಾದರ್ ಭರವಸೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಖಾದರ್, ಹಲ್ಲೆ ಮಾಡಿದವರು ವೈದ್ಯರಾಗಿರುವುದರಿಂದ ಹೆಚ್ಚಿನ ರೀತಿಯಲ್ಲಿ ಕಾನೂನು ಕ್ರಮ ಕೈಗೊಳ್ಳುತ್ತೇವೆ, ಈ ವೃತ್ತಿಯಲ್ಲಿ ಇರುವವರು ಈ ತರಹ ಮಾಡಿದರೆ ವೈದ್ಯರ ಮೇಲಿನ ಗೌರವ ಕಡಿಮೆಯಾಗುತ್ತದೆ, ಈಗಾಗಲೇ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ಕುಂದಾಪುರದ ಕನ್ನಡ ದಿನಪತ್ರಿಕೆ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಎಂಬವರ ಮೇಲೆ ಸರ್ಕಾರಿ ಆಸ್ಪತ್ರೆ ವೈದ್ಯ ಡಾ. ಮಹೇಂದ್ರ ಶೆಟ್ಟಿ ಹೋಟೆಲ್ ನಲ್ಲಿ ಹಲ್ಲೆ ನಡೆಸಿದ್ದರು.
ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಹಲ್ಲೆಗೊಳಗಾದ ವರದಿಗಾರ ಶ್ರೀಕಾಂತ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
- Advertisement -


