Saturday, June 13, 2026
Homeತಾಜಾ ಸುದ್ದಿವಸತಿ ಯೋಜನೆಗಳ ಫಲಾನುಭವಿಗಳಿಗೆ ಗುಡ್ ನ್ಯೂಸ್!

ವಸತಿ ಯೋಜನೆಗಳ ಫಲಾನುಭವಿಗಳಿಗೆ ಗುಡ್ ನ್ಯೂಸ್!

- Advertisement -
- Advertisement -

ಬೆಂಗಳೂರು: ವಿವಿಧ ವಸತಿ ಯೋಜನೆಗಳ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಫಲಾನುಭವಿಗಳ ವಾರ್ಷಿಕ ಆದಾಯ ಮಿತಿ ಹೆಚ್ಚಳ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಇಂದು ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ.

ಗ್ರಾಮೀಣ ಫಲಾನುಭವಿಗಳಿಗೆ 32 ಸಾವಿರ ರೂಪಾಯಿಯಿಂದ 1.20 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿದ್ದು, ನಗರ ಪ್ರದೇಶಗಳ ಫಲಾನುಭವಿಗಳಿಗೆ 87,600 ರೂಪಾಯಿಯಿಂದ 2 ಲಕ್ಷ ರೂಪಾಯಿಗೆ ಏರಿಕೆ ಮಾಡಿ ಸಿಎಂ ಘೋಷಣೆ ಮಾಡಿದ್ದಾರೆ.

ವಿಧಾನಸಭೆಯಲ್ಲಿ ನಡೆದ ಬಜೆಟ್ ಕುರಿತ ಚರ್ಚೆ ವೇಳೆ ವಸತಿ ಯೋಜನೆಗಳ ಫಲಾನುಭವಿಗಳ ಆದಾಯ ಮಿತಿ ಹೆಚ್ಚಳಕ್ಕೆ ವಿಪಕ್ಷಗಳ ಸದಸ್ಯರು ಆಗ್ರಹಿಸಿದ್ದರು.‌

ಹೀಗಾಗಿ ಇಂದು ಆದಾಯ ಮಿತಿ ಹೆಚ್ಚಳ ಮಾಡಿ ಸದನದಲ್ಲಿ ಸಿಎಂ ಘೋಷಣೆ ಮಾಡಿದ್ದಾರೆ. ತಕ್ಷಣ ಕ್ರಮ ಕೈಗೊಂಡಿರುವುದಕ್ಕೆ ಸದನದಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -

Latest News

error: Content is protected !!