Wednesday, June 24, 2026
HomeWorldದೈವಕ್ಕೆ ಅಪಹಾಸ್ಯಗೈದ ಬಾಲಿವುಡ್ ನಟ ರಣವೀರ್ ಪ್ರಕರಣ;‌ ಹೈಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸಲು ಮಾ. 17ಕ್ಕೆ...

ದೈವಕ್ಕೆ ಅಪಹಾಸ್ಯಗೈದ ಬಾಲಿವುಡ್ ನಟ ರಣವೀರ್ ಪ್ರಕರಣ;‌ ಹೈಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸಲು ಮಾ. 17ಕ್ಕೆ ಸರಕಾರಕ್ಕೆ ಕೊನೆಯ ಅವಕಾಶ

- Advertisement -
- Advertisement -

ಬೆಂಗಳೂರು: ಬಾಲಿವುಡ್ ನಟ ರಣವೀರ್ ಸಿಂಗ್ ಕಾಂತಾರ ಚಾಪ್ಟರ್-1 ಚಿತ್ರದ ಚಾಮುಂಡಿ ದೈವಪಾತ್ರವನ್ನು ಹೆಣ್ಣು ದೆವ್ವ ಎಂದು ಕರೆದು ಅಪಹಾಸ್ಯ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ದೂರು ರದ್ದತಿಗೆ ಕೋರಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಮಾ. 17ಕ್ಕೆ ಸರಕಾರಕ್ಕೆ ಹೈಕೋರ್ಟ್ ಕೊನೆಯ ಅವಕಾಶ ನೀಡಿದೆ.

ನಟ ರಣವೀರ್ ಸಿಂಗ್ ಹೈಕೋರ್ಟ್‌ಗೆ ತಮ್ಮ ವಿರುದ್ಧ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ದಾಖಲಾಗಿರುವ ಖಾಸಗಿ ದೂರು ಹಾಗೂ ಹೈಗೌಂಡ್ಸ್ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ.

ಇನ್ನು ಅರ್ಜಿಯ ವಿಚಾರಣೆ ಸೋಮವಾರದಂದು ನಡೆದಿದ್ದು, ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆ ವೇಳೆ ಪ್ರಕರಣದ ಖಾಸಗಿ ದೂರುದಾರರಾದ ಪ್ರಶಾಂತ್ ಮೆಥಲ್ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದರು. ಆದರೆ, ಹೈಗೌಂಡ್ಸ್ ಪೊಲೀಸರ ಪರ ರಾಜ್ಯ ಹೆಚ್ಚುವರಿ ಸರಕಾರಿ ಅಭಿಯೋಜಕ ಬಿ. ಎನ್. ಜಗದೀಶ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡುವಂತೆ ಕೋರಿದರು.

ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ಇದೇ ಕೊನೆಯ ಅವಕಾಶ ಎಂದು ತಿಳಿಸಿ ವಿಚಾರಣೆಯನ್ನು ಮಾ.17ಕ್ಕೆ ಮುಂದೂಡಿತು. ಅರ್ಜಿಯ ಮುಂದಿನ ವಿಚಾರಣೆವರೆಗೆ ಅರ್ಜಿದಾರರ ವಿರುದ್ದ ಬಲವಂತದ ಕ್ರಮ ಜರುಗಿಸಬಾರದು ಎಂದು ಪೊಲೀಸರಿಗೆ ಸೂಚಿಸಿ ಈ ಹಿಂದೆ ಹೊರಡಿಸಿದ್ದ ಮಧ್ಯಾಂತರ ಆದೇಶ ವಿಸ್ತರಿಸಿತು

- Advertisement -

Latest News

error: Content is protected !!