- Advertisement -
![]()
- Advertisement -
ಮಂಗಳೂರು: ಬಿಜೆಪಿ ಸರ್ಕಾರಕ್ಕೆ 35 ದಿನಗಳ ಆಯಸ್ಸಷ್ಟೇ ಇರೋದು. ಇದೊಂದು ಅಸಮರ್ಥ ಸರ್ಕಾರ. ಭ್ರಷ್ಟಾಚಾರದಿಂದ ಇಡೀ ಅಡಳಿತ ವ್ಯವಸ್ಥೆ ಗಬ್ಬು ನಾರುತ್ತಿದೆ. ಬಿಜೆಪಿ ಸರ್ಕಾರ ಸಂಪೂರ್ಣ ಸ್ತಬ್ಧಗೊಂಡಿದ್ದು, ಐಸಿಯುನಲ್ಲಿರುವಂತಿದೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ವಾಗ್ದಾಳಿ ನಡೆಸಿದ್ರು.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸರ್ಕಾರ ಪೌರ ಕಾರ್ಮಿಕರ ಸಮಸ್ಯೆ ಬಗ್ಗೆ ಗಮನ ಹರಿಸುತ್ತಿಲ್ಲ. ಪೌರ ಕಾರ್ಮಿಕರ ಬೇಡಿಕೆಯ ಬಗ್ಗೆ ಕಡೆಗಣನೆ ಮಾಡ್ತಿದೆ. ಕುಡಿಯುವ ನೀರಿಗೆ ಸಂಕಷ್ಟ ಇದೆ. ಹೀಗೆ ಸಾಕಷ್ಟು ಸಮಸ್ಯೆಗಳಿದ್ದು ಸರ್ಕಾರ ಸಮಸ್ಯೆ ಬಗೆಹರಿಸುವತ್ತ ಗಮನ ಹರಿಸುತ್ತಿಲ್ಲವೆಂದು ಹೇಳಿದ್ರು.
- Advertisement -


