Friday, April 26, 2024
Homeಕರಾವಳಿಉಡುಪಿಮಲೆಯಾಳ ಭಾಷೆ ಗೊತ್ತಿದ್ದರೆ ಮಾತ್ರ ಕೇರಳದಲ್ಲಿ ಸರ್ಕಾರಿ ಉದ್ಯೋಗ- ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತ...

ಮಲೆಯಾಳ ಭಾಷೆ ಗೊತ್ತಿದ್ದರೆ ಮಾತ್ರ ಕೇರಳದಲ್ಲಿ ಸರ್ಕಾರಿ ಉದ್ಯೋಗ- ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತ ಪಡಿಸಿದ ಕರ್ನಾಟಕ ಗಡಿಪ್ರದೇಶ ಅಭಿವೃಧ್ಧಿ ಪ್ರಾಧಿಕಾರ

spot_img
- Advertisement -
- Advertisement -

ಮಂಗಳೂರು: ಕೇರಳದಲ್ಲಿ ಮಲೆಯಾಳ ಭಾಷೆ ಗೊತ್ತಿದ್ದರೆ ಮಾತ್ರ ಸರ್ಕಾರಿ ಉದ್ಯೋಗ ಎಂಬ ಸಿಎಂ ಪಿಣರಾಯಿ ಹೇಳಿಕೆಗೆ ಕರ್ನಾಟಕ ಗಡಿಪ್ರದೇಶ ಅಭಿವೃಧ್ಧಿ ಪ್ರಾಧಿಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪ್ರಾಧಿಕಾರವು, “ರಾಜಧಾನಿ ತಿರುವನಂತಪುರದಲ್ಲಿ ಸೋಮವಾರ ನಡೆದ ಮಲೆಯಾಳ ಮಿಷನ್ ಮಾತೃಭಾಷಾ ದಿನಾಚರಣೆಯ ಸಂದರ್ಭದಲ್ಲಿ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು “ಮಲೆಯಾಳ ಭಾಷೆ ಗೊತ್ತಿದ್ದರೆ ಮಾತ್ರ ಕೇರಳದಲ್ಲಿ ಸರ್ಕಾರಿ ಉದ್ಯೋಗ” ಎಂಬ ಹೇಳಿಕೆ ಕೊಟ್ಟಿರುವುದು ಕಾಸರಗೋಡು ಹಾಗೂ ಸುತ್ತ ಮುತ್ತ ಇರುವ ಅಲ್ಪಸಂಖ್ಯಾತ ಕನ್ನಡಿಗರಲ್ಲಿ ಆತಂಕ ಉಂಟು ಮಾಡಿದೆ”.

“ಇದುವರೆಗೂ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿರುವ ಭಾಷಾ ಅಲ್ಪಸಂಖ್ಯಾತ ಪ್ರದೇಶವಾದ ಕಾಸರಗೋಡು ಪ್ರದೇಶದಲ್ಲಿ ಮಲೆಯಾಳ ಭಾಷೆಯಿಂದ ವಿನಾಯತಿ ಇದ್ದು ಅದು ಮುಂದುವರೆಯಬೇಕಾಗಿದೆ. ಒಂದು ವೇಳೆ ಕಾಸರಗೋಡಿನ ಕನ್ನಡಿಗರಿಗೂ ಮಲೆಯಾಳ ಭಾಷೆಯನ್ನು ಉದ್ಯೋಗದ ದೃಷ್ಟಿಯಿಂದ ಕಡ್ಡಾಯ ಮಾಡಿದರೆ ಅದು ಭಾಷಾ ಅಲ್ಪ ಸಂಖ್ಯಾತರಿಗೆ ಸಂವಿಧಾನಾತ್ಮಕವಾಗಿ ನೀಡಿದ ರಕ್ಷಣೆಯ ಉಲ್ಲಂಘನೆ ಆಗುತ್ತದೆ”.

“ದಯವಿಟ್ಟು ಕೇರಳ ಸರ್ಕಾರ ಕಾಸರಗೋಡಿನ ಕನ್ನಡಿಗರ ಉದ್ಯೋಗಕ್ಕೆ ಬಾಧಕ ಆಗುವಂತೆ ಯಾವುದೇ ರೀತಿಯಲ್ಲಿಯೂ ಮಲೆಯಾಳ ಭಾಷೆಯನ್ನು ಕಡ್ಡಾಯಗೊಳಿಸದಿರಲು ಕೇರಳ ಸರ್ಕಾರದ ಮುಖ್ಯ ಮಂತ್ರಿಗಳನ್ನು ನಮ್ಮ ರಾಜ್ಯದ ಮುಖ್ಯ ಮಂತ್ರಿಗಳ ಮೂಲಕ ಅಗ್ರಹ ಪೂರ್ವಕವಾಗಿ ಒತ್ತಾಯಿಸುತ್ತದೆ” ಎಂದು ಹೇಳಿದೆ.

ಒಂದು ವೇಳೆ ಕನ್ನಡಿಗರಿಗೆ ಇರುವ ಸಂವಿಧಾನಾತ್ಮಕ ರಕ್ಷಣೆಯ ಉಲ್ಲಂಘನೆ ಆದರೆ ಕಾನೂನಾತ್ಮಕ ಹೋರಾಟ ನಡೆಸಬೇಕಾಗುತ್ತದೆ. ಎಂದು ಡಾ.ಸಿ.ಸೋಮಶೇಖರ ಅಧ್ಯಕ್ಷರು ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಇವರು ತಿಳಿಸಿದ್ದಾರೆ .

- Advertisement -
spot_img

Latest News

error: Content is protected !!