Thursday, June 4, 2026
Homeತಾಜಾ ಸುದ್ದಿ12 ವರ್ಷಗಳಿಗೊಮ್ಮೆ ಕುಂಭಮೇಳ ನಡೆಯಲು ಸರ್ಕಾರಿ ಆದೇಶ: ಸಿಎಂ ಬಸವರಾಜ ಬೊಮ್ಮಾಯಿ‌ ಘೋಷಣೆ

12 ವರ್ಷಗಳಿಗೊಮ್ಮೆ ಕುಂಭಮೇಳ ನಡೆಯಲು ಸರ್ಕಾರಿ ಆದೇಶ: ಸಿಎಂ ಬಸವರಾಜ ಬೊಮ್ಮಾಯಿ‌ ಘೋಷಣೆ

- Advertisement -
- Advertisement -

ಮಂಡ್ಯ:  ಮಹಾ ಕುಂಭಮೇಳ ಪ್ರತಿ 12 ವರ್ಷಗಳಿಗೊಮ್ಮೆ ನಿಗದಿತವಾಗಿ ನಡೆಯಲು   ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಕೆ.ಆರ್. ಪೇಟೆಯಲ್ಲಿ ಶ್ರೀ ಮಲೆ ಮಹಾದೇಶ್ವರ ಕುಂಭಮೇಳದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಈ ಘೋಷಣೆ ಮಾಡಿದ್ದಾರೆ.

ಕಾವೇರಿ, ಲಕ್ಷ್ಮಣತೀರ್ಥ ಮತ್ತು ಹೇಮಾವತಿ ಮೂರು ಪವಿತ್ರ ನದಿಗಳ ಸಂಗಮವಾದ ಪುಣ್ಯಸ್ಥಳ ತ್ರಿವೇಣಿ ಸಂಗಮದಲ್ಲಿ ಈ ವರ್ಷ ಮಹಾ ಕುಂಭಮೇಳವನ್ನು ಪರಮ ಪೂಜ್ಯರ ನೇತೃತ್ವದಲ್ಲಿ ಪ್ರಾರಂಭಿಸಿ ಬಹಳ ಉತ್ತಮವಾಗಿ ನಡೆದಿದೆ ಎಂದು ಸಿಎಂ ಹೇಳಿದ್ದಾರೆ.

ಅಕ್ಟೋಬರ್ 13 ರಿಂದ ಇಂದಿನವರೆಗೆ ಮೂರು ದಿನಗಳ ಕಾಲ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಂಬಿಗರಹಳ್ಳಿಯಲ್ಲಿರುವ ತ್ರಿವೇಣಿ ಸಂಗಮದಲ್ಲಿ ಮಂಡ್ಯ ಜಿಲ್ಲಾಡಳಿತದ ವತಿಯಿಂದ ಮಹಾ ಕುಂಭ ಮೇಳವನ್ನು ಆಯೋಜಿಸಲಾಗಿತ್ತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅಕ್ಟೋಬರ್ 13 ರಂದು ಮಹಾ ಕುಂಭ ಮೇಳಕ್ಕೆ ಚಾಲನೆ ನೀಡಿದ್ದರು

- Advertisement -

Latest News

error: Content is protected !!