Thursday, May 16, 2024
Homeತಾಜಾ ಸುದ್ದಿರಾಜ್ಯದಲ್ಲಿ 5000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ರಾಜ್ಯದಲ್ಲಿ 5000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

spot_img
- Advertisement -
- Advertisement -

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರ ಗೌರವ ವೇತನ ಹೆಚ್ಚಳದ ಜೊತೆ ರಾಜ್ಯ ಸರ್ಕಾರ ಅತಿಥಿ ಶಿಕ್ಷಕರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ.

ರಾಜ್ಯದಲ್ಲಿ ಐದು ಸಾವಿರ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶವನ್ನೂ ಹೊರಡಿಸಿದೆ. ‌ 4000 ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರನ್ನು ಮತ್ತು 1000 ಪ್ರೌಢಶಾಲಾ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಈ ಆದೇಶದನ್ವಯ ನೇಮಕಾತಿಗೊಳ್ಳುವ ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ವೇತನ 10 ಸಾವಿರ ರೂಪಾಯಿ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಗೌರವ ವೇತನ 10.500 ರೂಪಾಯಿ ಆಗಿರಲಿದೆ.

ಪರಿಷ್ಕರಣೆ ಮಾಡಲ್ಪಟ್ಟಿರುವ ಹೊಸ ಗೌರವ ವೇತನ ನೇಮಕಾತಿಯಾಗಲಿರುವ ಐದು‌ ಸಾವಿರ ಅತಿಥಿ ಶಿಕ್ಷಕರಿಗೆ ಅನ್ವಯವಾಗಲಿದೆ.

- Advertisement -
spot_img

Latest News

error: Content is protected !!