Tuesday, October 6, 2026
Homeಕರಾವಳಿಮಂಗಳೂರುಸ್ಥಗಿತಗೊಂಡಿದ್ದ ಪೌಷ್ಟಿಕ ಆಹಾರ ಕಿಟ್ ವಿತರಣೆಗೆ ಆದೇಶ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿಗೆ...

ಸ್ಥಗಿತಗೊಂಡಿದ್ದ ಪೌಷ್ಟಿಕ ಆಹಾರ ಕಿಟ್ ವಿತರಣೆಗೆ ಆದೇಶ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿಗೆ ಸ್ಪಂದಿಸಿದ ಸರ್ಕಾರ

- Advertisement -
- Advertisement -

ಬೆಳ್ತಂಗಡಿ: ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ (ITDP) ಅಡಿಯಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದ ಮೂಲನಿವಾಸಿ (PVTG) ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಸ್ಥಗಿತಗೊಂಡಿದ್ದ ಪೌಷ್ಟಿಕ ಆಹಾರ ಕಿಟ್‌ಗಳ ವಿತರಣೆಯನ್ನು ಪುನಾರಂಭಿಸಲು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. KPCC ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಸಲ್ಲಿಸಿದ್ದ ಮನವಿಗೆ ಸರ್ಕಾರ ತಕ್ಷಣವೇ ಸ್ಪಂದಿಸಿ ಈ ಕ್ರಮ ಕೈಗೊಂಡಿದೆ.

ಕಳೆದ 8 ತಿಂಗಳಿಂದ ಆಹಾರ ಕಿಟ್‌ಗಳ ಪೂರೈಕೆ ಸ್ಥಗಿತಗೊಂಡಿದ್ದರಿಂದ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸಾವಿರಾರು ಮೂಲನಿವಾಸಿ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದವು. ವಿಶೇಷವಾಗಿ ಮಳೆಗಾಲದಲ್ಲಿ ಕೆಲಸವಿಲ್ಲದೆ ಕಷ್ಟಪಡುತ್ತಿದ್ದ ಕೊರಗ, ಮಲೆಕುಡಿಯ ಸೇರಿದಂತೆ ಹಲವು ಜನಾಂಗದವರ ಸ್ಥಿತಿಯನ್ನು ಗಮನಿಸಿ ರಕ್ಷಿತ್ ಶಿವರಾಂ ಅವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ ಅವರಿಗೆ ಮನವಿ ಸಲ್ಲಿಸಿ ತಕ್ಷಣ ಕಿಟ್ ವಿತರಿಸುವಂತೆ ಒತ್ತಾಯಿಸಿದ್ದರು.

ಇದಕ್ಕೆ ಸ್ಪಂದಿಸಿರುವ ಸರ್ಕಾರ 144.41 ಕೋಟಿ ರೂಪಾಯಿ ವೆಚ್ಚದಲ್ಲಿ 12 ತಿಂಗಳ ಅವಧಿಗೆ ಪೌಷ್ಟಿಕ ಆಹಾರ ಕಿಟ್ ಪೂರೈಸಲು M/S N.C.C.F of India Limited ಸಂಸ್ಥೆಗೆ ಕಾರ್ಯಾದೇಶ ನೀಡಿದೆ. ಈ ಯೋಜನೆಯಡಿ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ 9 ಜಿಲ್ಲೆಗಳ ಕೊರಗ, ಜೇನುಕುರುಬ, ಕಾಡುಕುರುಬ, ಮಲೆಕುಡಿಯ, ಸೋಲಿಗ, ಸಿದ್ಧಿ ಮುಂತಾದ ಜನಾಂಗದ ಒಟ್ಟು 52,678 ಕುಟುಂಬಗಳಿಗೆ ಪ್ರತಿ ತಿಂಗಳು 2,284.50 ರೂಪಾಯಿ ಮೌಲ್ಯದ ಆಹಾರ ಕಿಟ್ ಸಿಗಲಿದೆ.

ತಮ್ಮ ಮನವಿಗೆ ತಕ್ಷಣ ಸ್ಪಂದಿಸಿ ಆದೇಶ ಹೊರಡಿಸಿದ ಕರ್ನಾಟಕ ಸರ್ಕಾರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -

Latest News

error: Content is protected !!