Saturday, June 6, 2026
Homeತಾಜಾ ಸುದ್ದಿಕರ್ನಾಟಕ ಮತ್ತೆ 15 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್: ಅಧಿಕೃತ ಘೋಷಣೆಯೊಂದೇ ಬಾಕಿ

ಕರ್ನಾಟಕ ಮತ್ತೆ 15 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್: ಅಧಿಕೃತ ಘೋಷಣೆಯೊಂದೇ ಬಾಕಿ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿರೀಕ್ಷೆ ಮೀರಿಯೂ ಹೆಚ್ಚಾಗ್ತಿದೆ. ಪ್ರತಿದಿನ 50 ಸಾವಿರದ ಹತ್ತಿರ ಹತ್ತಿರ ಕೊರೊನಾ ಹೊಸ ಪ್ರಕರಣಗಳು ವರದಿಯಾಗುತ್ತಿವೆ. ಹಾಗಾಗಿ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಒಂದೇ ಪರಿಹಾರ ಅನ್ನೋ ಮಾತುಗಳು ಕೇಳಿ ಬರುತ್ತಿದ್ದವು. ಹಾಗಾಗಿ ರಾಜ್ಯ ಸರ್ಕಾರ ಇದೇ ನಿಟ್ಟಿನಲ್ಲಿ ತೀರ್ಮಾನ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

ಇನ್ನು ಈ ನಿಟ್ಟಿನಲ್ಲಿ ಇಂದು ಸಿಎಂ ನಿವಾಸದಲ್ಲಿ ಸಭೆ ಕೂಡ ನಡೆದಿತ್ತು ಎನ್ನಲಾಗಿದೆ. ಸಭೆಯಲ್ಲೂ ಇದೇ ವಿಚಾರವನ್ನು ಚರ್ಚಿಸಲಾಗಿದೆ. ಅಲ್ಲದೇ ಈಗಾಗಲೇ ಸಂಪೂರ್ಣ ಲಾಕ್ ಡೌನ್ ಗೆ ತೀರ್ಮಾನವನ್ನು ಕೈಗೊಳ್ಳಲಾಗಿದ್ದು ಅಧಿಕೃತ ಘೋಷಣೆಯೊಂದೇ ಬಾಕಿ ಎನ್ನಲಾಗಿದೆ. ಅಲ್ಲದೇ ಸಿಎಂ ಕೂಡ ಈಗಾಗಲೇ ಲಾಕ್ ಡೌನ್ ಅನಿವಾರ್ಯ ಆಗಬಹುದು ಎಂದು ಹೇಳಿದ್ದಾರೆ. ಹಾಗಾಗಿ ಲಾಕ್ ಡೌನ್ ಆಗೋದು ಬಹುತೇಕ ಪಕ್ಕಾ ಎನ್ನಲಾಗಿದೆ. ಮೇ 10 ರಿಂದ 15 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಆಗೋದು ಬಹುತೇಖ ಖಚಿತವಾಗಿದೆ.

- Advertisement -

Latest News

error: Content is protected !!