Saturday, May 18, 2024
Homeಕರಾವಳಿಉಡುಪಿಉಡುಪಿ: 2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲು ಸರಕಾರದಿಂದ ಸಿದ್ಧತೆ; ಸಿಎಂ ಬಸವರಾಜ...

ಉಡುಪಿ: 2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲು ಸರಕಾರದಿಂದ ಸಿದ್ಧತೆ; ಸಿಎಂ ಬಸವರಾಜ ಬೊಮ್ಮಾಯಿ!

spot_img
- Advertisement -
- Advertisement -

ಉಡುಪಿ: ರಾಜ್ಯದಲ್ಲಿ 2 ರಿಂದ 18 ವರ್ಷದೊಳಗಿನವರಿಗೆ ಕೋವಿಡ್ ಲಸಿಕೆ ಹಾಕಲು ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದಿಂದ ಅಂತಿಮ ಪ್ರಮಾಣಪತ್ರದ ನಿರೀಕ್ಷೆಯಲ್ಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ಉಡುಪಿಯಲ್ಲಿ ಮಾತನಾಡಿದ ಅವರು, ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಲಸಿಕೆ ಹಾಕಲು ಕೇಂದ್ರದಿಂದ ಅನುಮತಿ ಸಿಕ್ಕ ಕೂಡಲೇ ಲಸಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದರು.

ಮಕ್ಕಳ ಲಸಿಕೆ ಕೊನೆಯ ಸರ್ಟಿಫಿಕೇಶನ್ ನಿರೀಕ್ಷೆಯಲ್ಲಿದ್ದೇವೆ. ಕೇಂದ್ರ ಸರಕಾರದ ಸಕ್ಷಮ ಪ್ರಾಧಿಕಾರದ ಪ್ರಮಾಣಪತ್ರ ಬರಬೇಕಾಗಿದೆ ಎಂದರು. ರಾಜ್ಯದಲ್ಲಿ ಈಗಾಗಲೇ ಶೇ. 82 ರಷ್ಟು ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ಶೇ. 90 ಮೊದಲ ಡೋಸ್ ಪೂರೈಸುತ್ತೇವೆ. ಎರಡನೇ ಡೋಸ್ ಡಿಸೆಂಬರ್ ಅಂತ್ಯದೊಳಗೆ ಶೇ. 70 ಪೂರ್ಣ ಮಾಡುವ ವಿಶ್ವಾಸವಿದೆ ಎಂದವರು ಹೇಳಿದರು.

ನಾವು 2 ರಿಂದ 18 ವರ್ಷದೊಳಗಿನ ಮಕ್ಕಳ ರಕ್ಷಣೆ ಮಾಡಬೇಕಾಗಿದೆ. ಅಂತಿಮ ನಿರ್ಧಾರ ಆದ ತಕ್ಷಣ ಮಕ್ಕಳಿಗೆ ಲಸಿಕೆ ನೀಡಲು ಅನುಮತಿ ಕೊಡುತ್ತೇವೆ ಎಂದರು.ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆ ಇವಾಗಲೇ ಜಾರಿಯಲ್ಲಿದೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಬಹಳಷ್ಟು ಚಿಂತನೆ ಮಾಡಿದ್ದೇವೆ. ಇದಕ್ಕಾಗಿ ಇತರ ರಾಜ್ಯಗಳ ಕಾನೂನು ಅಭ್ಯಾಸ ಮಾಡುತ್ತಿದ್ದೇವೆ. ಆದಷ್ಟು ಶೀಘ್ರ ಕಾನೂನು ತರಲು ಕ್ರಮ ಕೈಗೊಳ್ಳುತ್ತೇವೆ ಎಂದರು.ಕಾಂಗ್ರೆಸ್ ನಾಯಕರ ರಹಸ್ಯ ಮಾತುಕತೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಲು ಸಿಎಂ ನಿರಾಕರಿಸಿದ್ದಾರೆ.

- Advertisement -
spot_img

Latest News

error: Content is protected !!