Thursday, March 28, 2024
Homeತಾಜಾ ಸುದ್ದಿರಾಷ್ಟ್ರೀಯವಾದಕ್ಕೆ ಸವಾಲು ಹಾಕುವುದನ್ನು ಸ್ಪಷ್ಟವಾಗಿ ನಿಯಂತ್ರಣಕ್ಕೆ ತರುತ್ತೇವೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ...

ರಾಷ್ಟ್ರೀಯವಾದಕ್ಕೆ ಸವಾಲು ಹಾಕುವುದನ್ನು ಸ್ಪಷ್ಟವಾಗಿ ನಿಯಂತ್ರಣಕ್ಕೆ ತರುತ್ತೇವೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

spot_img
- Advertisement -
- Advertisement -

ಹಾವೇರಿ: ಸಂವಿಧಾನ ಬದ್ಧವಾಗಿ ರಾಜ್ಯದ ಉಚ್ಚ ನ್ಯಾಯಾಲಯ ಸಮವಸ್ತ್ರ ಪಾಲಿಸಿ ಎಂದು ಹೇಳಿದೆ
ಅದನ್ನು ಪಾಲಿಸಬೇಕು ಅನ್ನೋದು ಸರ್ಕಾರದ ನಿಲುವು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ಇಂದು ಕರಾವಳಿ ಭಾಗದಲ್ಲಿ ಕೆಲ ಸಂಘಟನೆಗಳಿಂದ ತಾಲಿಬಾನ್ ಮಾದರಿ ಸಂಸ್ಕೃತಿ ಹೇರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅವರೇನು ಹೇಳ್ತಾರೆ, ಇವರೇನು ಹೇಳ್ತಾರೆ ಅನ್ನೋದು ಯಾವುದೂ ಅಲ್ಲ. ಹೈಕೋರ್ಟ್ ತೀರ್ಪುನ್ನು ಮೀರಿ ಯಾರಾದರೂ ಹೇಳ್ತಾರೆ ಅಂದರೆ ಅವರಿಗೆ ಇರುವ ಸಂವಿಧಾನದ ಮೇಲಿನ ಗೌರವ ಪ್ರಶ್ನಿಸುವ ಅನಿವಾರ್ಯತೆ ಇದೆ ಎಂದು ಸ್ಪಷ್ಟಪಡಿಸಿದ್ದೇವೆ ಎಂದು ಹೇಳಿದ್ದಾರೆ.

ಯಾರಾದರೂ ಸಂಪ್ರದಾಯದ ಹೆಸರಿನಲ್ಲಿ ಅನ್ಯಾಯ ಮಾಡ್ತಾರೆ ಅಂದರೆ ಅದು ಅವರ ಸಂಸ್ಕೃತಿ ಬಿಂಬಿಸುತ್ತದೆ, ಕೆಲವರು ಮತೀಯವಾದ ಇಟ್ಟುಕೊಂಡು ರಾಷ್ಟ್ರೀಯವಾದಕ್ಕೆ ಸವಾಲು ಹಾಕುವಂತಹ ವಿಚಾರ ತಾವೆಲ್ಲಾ ಕೇಳಿದ್ದೀರಿ,ಇದನ್ನು ಸ್ಪಷ್ಟವಾಗಿ ನಿಯಂತ್ರಣಕ್ಕೆ ತರುತ್ತೇವೆ‌ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಯಾರೂ ಕೂಡಾ ಕಾನೂನಿಗಿಂತ ಮೇಲಲ್ಲ. ಕಾನೂನಿಗೆ ಪೂರಕವಾದ ವಾತಾವರಣ ಮಾಡುತ್ತೇವೆ. ಕಾನೂನಿಗೆ ಸೆಡ್ಡು ಹೊಡೆಯುವವರನ್ನು ನಿಯಂತ್ರಣ ಮಾಡುವ ಅಧಿಕಾರ ಇದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

- Advertisement -
spot_img

Latest News

error: Content is protected !!