Wednesday, June 3, 2026
Homeಕರಾವಳಿಮೀನುಗಾರ ಮಹಿಳೆಯರಿಗೆ ನೀಡುವ ಸಹಾಯಧನ ಪುರುಷರಿಗೂ ನೀಡುವ ಬೇಡಿಕೆ ಬಗ್ಗೆ ಪರಿಶೀಲನೆ:ಮೀನುಗಾರಿಕೆ ವಿಶ್ವ ವಿದ್ಯಾಲಯ ಬಗ್ಗೆ...

ಮೀನುಗಾರ ಮಹಿಳೆಯರಿಗೆ ನೀಡುವ ಸಹಾಯಧನ ಪುರುಷರಿಗೂ ನೀಡುವ ಬೇಡಿಕೆ ಬಗ್ಗೆ ಪರಿಶೀಲನೆ:ಮೀನುಗಾರಿಕೆ ವಿಶ್ವ ವಿದ್ಯಾಲಯ ಬಗ್ಗೆ ಮುಂದಿನ ವರ್ಷ ಚಿಂತನೆ:ಸಿಎಂ ಸಿದ್ದರಾಮಯ್ಯ ಭರವಸೆ

- Advertisement -
- Advertisement -

ಬೆಂಗಳೂರು: ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರರಿಗೆ ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ ಬಳಿಕ ಸಿಎಂ ಈ ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ ಮೀನುಗಾರಿಕೆ ವಿಶ್ವ ವಿದ್ಯಾಲಯ ಮಾಡುವ ಬಗ್ಗೆ ಮುಂದಿನ ವರ್ಷ ವಿಚಾರ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಮೀನಿನ‌ ಸಂತತಿ ಮತ್ತು ಪ್ರಮಾಣವನ್ನು ಹೆಚ್ಚಿಸಲು ನಮ್ಮ ಸರ್ಕಾರ ಅಗತ್ಯ ಎಲ್ಲಾ ನೆರವನ್ನೂ ನೀಡುತ್ತದೆ ಎಂದು ಭರವಸೆ ನೀಡಿದ ಸಿದ್ದರಾಮಯ್ಯ, ಮುಂದಿನ ವರ್ಷದಿಂದ ಮೀನುಗಾರ ಸಮುದಾಯಕ್ಕೆ ಮನೆ ಕಟ್ಟಿಸಿಕೊಡುವ ಕೆಲಸ ಆರಂಭವಾಗುತ್ತದೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!