Monday, May 6, 2024
Homeತಾಜಾ ಸುದ್ದಿಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಸುಗ್ರಿವಾಜ್ಞೆಗೆ ರಾಜ್ಯಪಾಲರ ಅಂಕಿತ

ಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಸುಗ್ರಿವಾಜ್ಞೆಗೆ ರಾಜ್ಯಪಾಲರ ಅಂಕಿತ

spot_img
- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಈ ಕುರಿತು ಅಧಿಕೃತವಾದ ವಿಶೇಷ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ.

ಇದರಿಂದ ಇನ್ನು ಮುಂದೆ ಅನುಸೂಚಿತ ಜಾತಿಯ ಮೀಸಲಾತಿ ಪ್ರಮಾಣ ಶೇಕಡ 15 ರಿಂದ 17 ಕ್ಕೆ ಏರಲಿದ್ದು, ಅನುಸೂಚಿತ ಪಂಗಡಗಳ ಮೀಸಲಾತಿ ಪ್ರಮಾಣ ಶೇಕಡಾ 3 ರಿಂದ 7 ಕ್ಕೆ ಏರಿಸಲಾಗಿದೆ.

ಈ ಮೂಲಕ ಅನುಸೂಚಿತ ಜಾತಿ ಮತ್ತು ಪಂಗಡಗಳ ಜನಾಂಗಕ್ಕೆ ರಾಜ್ಯ ಸರ್ಕಾರ ದೀಪಾವಳಿ ಕೊಡುಗೆ ಕೊಟ್ಟಂತಾಗಿದೆ.

ಸುಗ್ರೀವಾಜ್ಞೆಗೆ ಮುಂದಿನ ಡಿಸೆಂಬರ್ ನಲ್ಲಿ ರಾಜ್ಯ ಸರ್ಕಾರ ವಿಧಾನ ಮಂಡಲದ ಎರಡೂ ಸದನದಲ್ಲಿ ವಿಧೇಯಕ ಮಂಡಿಸಿ ಒಪ್ಪಿಗೆ ಪಡೆಯಬೇಕಿದೆ.

- Advertisement -
spot_img

Latest News

error: Content is protected !!