- Advertisement -
![]()
- Advertisement -
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ ರಾಜಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೇ 29ರ ಶುಕ್ರವಾರದಂದು ಅಂಗೀಕರಿಸಿದ್ದಾರೆ.
ರಾಜೀನಾಮೆ ಅಂಗೀಕಾರದ ತಕ್ಷಣದಿಂದಲೇ ರಾಜ್ಯ ಸಚಿವ ಸಂಪುಟವೂ ವಿಸರ್ಜನೆಗೊಳ್ಳಲಿದ್ದು, ಮುಂದಿನ ಪರ್ಯಾಯ ವ್ಯವಸ್ಥೆ ಆಗುವವರೆಗೂ ಸಿದ್ದರಾಮಯ್ಯ ಅವರೇ ಉಸ್ತುವಾರಿ ಮುಖ್ಯಮಂತ್ರಿಯಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಈ ಮಧ್ಯೆ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ದೆಹಲಿಯಿಂದ ವಾಪಸ್ ಆದ ಬಳಿಕ, ಶನಿವಾರ ಅಥವಾ ಭಾನುವಾರ ಕಾಂಗ್ರೆಸ್ ಶಾಸಕರ ಮಹತ್ವದ ಸಭೆ ನಡೆಯಲಿದ್ದು, ಕಾಂಗ್ರೆಸ್ ಮುಖಂಡರಾದ ರಣದೀಪ್ ಸುರ್ಜೇವಾಲ ಮತ್ತು ಕೆಸಿ ವೇಣುಗೋಪಾಲ್ ಅವರ ಸಮ್ಮುಖದಲ್ಲಿ ಹೊಸ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಅಂತಿಮವಾಗಿ ಹೊಸ ಸಿಎಂ ಹೆಸರನ್ನು ಹೈಕಮಾಂಡ್ ನಾಯಕರು ಅಧಿಕೃತವಾಗಿ ಘೋಷಿಸಲಿದ್ದಾರೆ.
- Advertisement -


