Tuesday, June 23, 2026
Homeಕರಾವಳಿಸಂತ ಅಲೋಶಿಯಸ್ ವಿಶ್ವವಿದ್ಯಾನಿಲಯದಲ್ಲಿ ನೂತನ ಶಾಲೆ ಉದ್ಘಾಟನೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ

ಸಂತ ಅಲೋಶಿಯಸ್ ವಿಶ್ವವಿದ್ಯಾನಿಲಯದಲ್ಲಿ ನೂತನ ಶಾಲೆ ಉದ್ಘಾಟನೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ

- Advertisement -
- Advertisement -

ಮಂಗಳೂರು : ಸಂತ ಅಲೋಶಿಯಸ್ ವಿಶ್ವವಿದ್ಯಾನಿಲಯದ ಎಲ್‌ಸಿಆರ್‌ಐ (LCRI) ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ನೂತನ ಶಾಲೆಗಳನ್ನು ಉದ್ಘಾಟಿಸಿದರು. ನಂತರದಲ್ಲಿ ‘ಸ್ಕೂಲ್ ಆಫ್ ಎಂಜಿನಿಯರಿಂಗ್’ ಮತ್ತು ‘ಸ್ಕೂಲ್ ಆಫ್ ಲಾ’ (ಕಾನೂನು ಶಾಲೆ) ವಿಭಾಗಗಳನ್ನು ಲೋಕಾರ್ಪಣೆ ಮಾಡಲಾಯಿತು.

ಈ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗೌರವ ಅತಿಥಿಗಳಾಗಿ ಭಾಗವಹಿಸಿದರು. ಮಂಗಳೂರು ಜೆಸುಯಿಟ್ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರು ಹಾಗೂ ಸಂತ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ಅದ ಮೆಲ್ವಿನ್ ಜೆ. ಪಿಂಟೊ ಎಸ್.ಜೆ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ| ಪ್ರವೀಣ್ ಮಾರ್ಟಿಸ್ ಎಸ್.ಜೆ. ಮತ್ತು ಮ ರಿಜಿಸ್ಟ್ರಾ‌ರ್ ಡಾ| ರೊನಾಲ್ಡ್ ನಜರೆತ್ ಅವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!