Wednesday, July 15, 2026
Homeತಾಜಾ ಸುದ್ದಿಝಮೀರ್ ಅಹ್ಮದ್ ವಿರುದ್ಧದ ಪ್ರಾಸಿಕ್ಯೂಷನ್‌ಗೆ ಅನುಮತಿ ನಿರಾಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಝಮೀರ್ ಅಹ್ಮದ್ ವಿರುದ್ಧದ ಪ್ರಾಸಿಕ್ಯೂಷನ್‌ಗೆ ಅನುಮತಿ ನಿರಾಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

- Advertisement -
- Advertisement -

ಮಾಜಿ ಸಚಿವ ಝಮೀರ್ ಅಹ್ಮದ್ ಖಾನ್ ವಿರುದ್ಧದ ಐಎಂಎ (IMA) ಹಗರಣ ಹಾಗೂ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದ ಲೋಕಾಯುಕ್ತದ ಮನವಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಾಂತ್ರಿಕ ಹಾಗೂ ಕಾನೂನಾತ್ಮಕ ಕಾರಣಗಳನ್ನು ಉಲ್ಲೇಖಿಸಿ ತಿರಸ್ಕರಿಸಿದ್ದು, ಈ ಸಂಬಂಧಿತ ಕಡತವನ್ನು ಮರಳಿ ಕಳುಹಿಸಿದ್ದಾರೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕುರಿತಾದ ಚರ್ಚೆಗಳು ರಾಜಕೀಯ ವಲಯದಲ್ಲಿ ತೀವ್ರವಾಗಿ ನಡೆಯುತ್ತಿರುವ ಸಂದರ್ಭದಲ್ಲೇ ರಾಜ್ಯಪಾಲರ ಈ ಮಹತ್ವದ ನಿರ್ಧಾರ ಹೊರಬಿದ್ದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಇದರಿಂದಾಗಿ ಝಮೀರ್ ಅಹ್ಮದ್ ವಿರುದ್ಧ ಕಾನೂನು ಪ್ರಕ್ರಿಯೆ ಮುಂದುವರಿಸಲು ಸಜ್ಜಾಗಿದ್ದ ಲೋಕಾಯುಕ್ತದ ತನಿಖೆಗೆ ಸದ್ಯಕ್ಕೆ ತಾತ್ಕಾಲಿಕ ಹಿನ್ನಡೆಯಾದಂತಾಗಿದೆ.

- Advertisement -

Latest News

error: Content is protected !!