- Advertisement -
- Advertisement -
ಧರ್ಮಸ್ಥಳ: ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಇಂದು ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ 8ಕ್ಕೆ ಅವರು ಬೆಂಗಳೂರಿನಿಂದ ಹೊರಟಿದ್ದು ರಸ್ತೆ ಮೂಲಕ ಮಧ್ಯಾಹ್ನ 1 ಗಂಟೆಗೆ ಮೂಡಿಗೆರೆಯ ಅತಿಥಿ ಗೃಹಕ್ಕೆ ತಲುಪಲಿದ್ದಾರೆ.
ಅಲ್ಲಿಂದ 3-30ಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ದೇವರ ದರ್ಶನದ ಬಳಿಕ ಸಂಜೆ 5 ಗಂಟೆಗೆ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಬಳಿಕ ರಾತ್ರಿ ಶ್ರೀಸನ್ನಿಧಿ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡುವ ಅವರು ಬುಧವಾರ ಬೆಳಿಗ್ಗೆ ದೇವರ ದರ್ಶನದ ಬಳಿಕ ಅಮೃತವರ್ಷಿಣಿ ಸಭಾಭವನದಲ್ಲಿ ನವಜೀವನ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ ಮೂರು ಗಂಟೆಗೆ ಧರ್ಮಸ್ಥಳದಿಂದ ಹೊರಟು ರಾತ್ರಿ ಕುದುರೆಮುಖದಲ್ಲಿ ಅರಣ್ಯ ಇಲಾಖೆಯ ಅತಿಥಿಗೃಹದಲ್ಲಿ ತಂಗಲಿದ್ದಾರೆ. ಬಳಿಕ ಅಲ್ಲಿಂದ ಬೆಂಗಳೂರಿಗೆ ತೆರಳಲಿದ್ದಾರೆ.
- Advertisement -