Tuesday, May 14, 2024
Homeತಾಜಾ ಸುದ್ದಿರಾಜ್ಯದಲ್ಲಿ 'ಗೋಹತ್ಯೆ ನಿಷೇಧ' ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ರಾಜ್ಯದಲ್ಲಿ ‘ಗೋಹತ್ಯೆ ನಿಷೇಧ’ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೆಲವಾರಗಳಿಂದ ಭಾರಿ ಚರ್ಚೆಗೆ ಗ್ರಾಸವಾಗಿರುವ ಗೋಹತ್ಯೆ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಸಹಿ ಹಾಕಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ.

ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ಕಾಯ್ದೆಯನ್ನು ಕೊನೆಗೂ ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದ್ದು, ಮಸೂದೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. ಇದೀಗ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ.

ಸುಗ್ರೀವಾಜ್ಞೆಯ ಪ್ರಕಾರ ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿ ಮೇಲೆ ಸಹ ನಿರ್ಬಂಧ ಹೇರಲಾಗಿದೆ. ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದ್ರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದ್ರೆ 3 ವರ್ಷದಿಂದ 7 ವರ್ಷ ಜೈಲು ಶಿಕ್ಷೆ ಸಹ ವಿಧಿಸಲಾಗುವುದು ಎಂದು ಹೇಳಲಾಗಿದೆ. ಜೊತೆಗೆ, 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ಸಹ ವಿಧಿಸಲಾಗುವುದು.

- Advertisement -
spot_img

Latest News

error: Content is protected !!