Friday, May 10, 2024
Homeಕರಾವಳಿಬೆಳ್ತಂಗಡಿಯ ಕಳೆಂಜ ಗೋ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಗೋವಿಗಾಗಿ ಮೇವು ಕಾರ್ಯಕ್ರಮ

ಬೆಳ್ತಂಗಡಿಯ ಕಳೆಂಜ ಗೋ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಗೋವಿಗಾಗಿ ಮೇವು ಕಾರ್ಯಕ್ರಮ

spot_img
- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳದ ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಬದುಕು ಕಟ್ಟೋಣ ಬನ್ನಿ ತಂಡ ಉಜಿರೆ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ಇವರ ವತಿಯಿಂದ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ (ರಿ) ಕಳೆಂಜ ನಂದಗೋಕುಲ ಗೋಶಾಲೆಯ ಸಹಕಾರದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಅಂಗವಾಗಿ ಇಂದು ಕಳೆಂಜ ಗೋಶಾಲೆಯಲ್ಲಿ ಗೋವಿಗಾಗಿ ಮೇವು ಅಭಿಯಾನ ಕಾರ್ಯಕ್ರಮ ನಡೆಯಿತು.

ಧ್ವಜಾರೋಹಣವನ್ನು ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ನೆರವೇರಿಸಿದರು. ಕಾರ್ಯಕ್ರಮಕ್ಕೆ ಗೋವಿಗೆ ಮೇವು ನೀಡುವ ಮೂಲಕ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಚಾಲನೆ ನೀಡಿದರು. ನಂತರ ಎಲ್ಲಾ ಸದಸ್ಯರು ಗೋವಿಗೆ ಮೇವು ನೀಡಿದರು.

ಕಾರ್ಯಕ್ರಮ ಆರಂಭದ ವೇಳೆ ಹೆಣ್ಣು ಕರುವಿಗೆ ಜನ್ಮ ನೀಡಿದ ಹಸು

ವಿಶೇಷವೆಂದರೆ ಇಂದು ಕಾರ್ಯಕ್ರಮ ಆರಂಭಿಸುವ ವೇಳೆ ಕಳೆಂಜ ಗೋಶಾಲೆಗೆ ಮೊದಲು ಬಂದ ಗೋವೊಂದು ಹೆಣ್ಣು ಕರುವಿಗೆ ಜನ್ಮ ನೀಡಿದೆ.  ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ಶರತ್ ಕೃಷ್ಣ ಪಡ್ವೇಟ್ನಾಯ ,ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ನವರು ನಡೆಸುತ್ತಿರುವ ನಂದಗೋಕುಲ ಗೋ ಶಾಲೆ ಕಳೆಂಜದ ಅಧ್ಯಕ್ಷ ಡಾ.ದಯಾಕರ್, ಕಾರ್ಯದರ್ಶಿ ನ್ಯಾಯವಾದಿ ಸುಬ್ರಮಣ್ಯ ಅಗರ್ತ,ಗೋ ಶಾಲೆಯ ಟ್ರಸ್ಟಿ ಭಾಸ್ಕರ್ ಧರ್ಮಸ್ಥಳ, ಗೋ ಶಾಲೆಯ ಟ್ರಸ್ಟಿ ನವೀನ್ ನೆರಿಯ,ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಲಕ್ಷ್ಮೀ ಗ್ರೂಪ್ಸ್ ಮಾಲೀಕ ಮೋಹನ್ ಕುಮಾರ್ ಮತ್ತು ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ ,ರೋಟರಿ ಕ್ಲಬ್ ಕಾರ್ಯದರ್ಶಿ ಅಬೂಬಕ್ಕರ್, ರೋಟರಿ ಕ್ಲಬ್ ನಿಕಟ ಪೂರ್ವ ಅಧ್ಯಕ್ಷರಾದ ನ್ಯಾಯವಾದಿ ಧನಂಜಯ್ ರಾವ್ ಮತ್ತು ಬದುಕು ಕಟ್ಟೋಣ ಬನ್ನಿ ತಂಡ ಸದಸ್ಯರು ಮತ್ತು ರೋಟರಿ ಕ್ಲಬ್ ಸದಸ್ಯರು ಮತ್ತಿತರು ಭಾಗಿಯಾಗಿದ್ದರು.

- Advertisement -
spot_img

Latest News

error: Content is protected !!