Sunday, June 7, 2026
Homeಕರಾವಳಿಪುತ್ತೂರು : ಇಲಾಖೆಯ ಲೆಟರ್ ಹೆಡ್, ಸೀಲ್, ಸಹಿ ದುರುಪಯೋಗ; ಸಿಬ್ಬಂದಿ ವಿರುದ್ಧ ದೂರು ದಾಖಲು

ಪುತ್ತೂರು : ಇಲಾಖೆಯ ಲೆಟರ್ ಹೆಡ್, ಸೀಲ್, ಸಹಿ ದುರುಪಯೋಗ; ಸಿಬ್ಬಂದಿ ವಿರುದ್ಧ ದೂರು ದಾಖಲು

- Advertisement -
- Advertisement -

ಪುತ್ತೂರು : ವೈಯಕ್ತಿಕ ಕೆಲಸಕ್ಕಾಗಿ ಇಲಾಖೆಯ ಲೆಟರ್ ಹೆಡ್, ಸೀಲ್ ಮತ್ತು ಸಹಿಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಪುತ್ತೂರಿನಲ್ಲಿ ಸರಕಾರಿ ಉದ್ಯೋಗಿಯೊಬ್ಬರ ವಿರುದ್ಧ ದೂರು ನೀಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರು ತಾಲೂಕು ಕಾರ್ಯನಿರ್ವಹಣಾಧಿಕಾರಿಯಾಗಿರುವ ನವೀನ್ ಭಂಡಾರಿ ಎಂಬವರು ಸಿಬ್ಬಂದಿ ಶಿವಾನಂದ ಎಂಬವರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನ್ನ ವೈಯುಕ್ತಿಕ ಮತ್ತು ಸ್ವಹಿತಾಸಕ್ತಿಗಾಗಿ ಸರಕಾರಿ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಕರಣದ ಕುರಿತು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ತಾಲೂಕು ಪಂಚಾಯತ್ ದಾಖಲೆ ಪತ್ರಗಳ ವಂಚನೆ ಮಾಡಿರುವ ಬಗ್ಗೆಯೂ ಕಾರ್ಯನಿರ್ವಹಣಾಧಿಕಾರಿ ಸಿಬಂದಿ ವಿರುದ್ದ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ದೂರನ್ನು ಸ್ವೀಕರಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

- Advertisement -

Latest News

error: Content is protected !!