Friday, March 29, 2024
Homeಚಿಕ್ಕಮಗಳೂರುಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ರಕ್ಷಿತಾ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ; 8 ಲಕ್ಷ...

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ರಕ್ಷಿತಾ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ; 8 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್

spot_img
- Advertisement -
- Advertisement -

ಚಿಕ್ಕಮಗಳೂರು : ಅಂಗಾಂಗ ದಾನ ಮಾಡಿ 9 ಮಂದಿಯ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ಚಿಕ್ಕಮಗಳೂರು ಜಿಲ್ಲೆಯ ಯುವತಿ ರಕ್ಷಿತಾ ಕುಟುಂಬಕ್ಕೆ 8 ಲಕ್ಷ ಪರಿಹಾರ ಸಿಕ್ಕಿದೆ.

ಇಂದು ರಕ್ಷಿತಾ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ 8 ಲಕ್ಷದ ಪರಿಹಾರದ ಚೆಕ್ ವಿತರಿಸಿದ್ದಾರೆ. ಸರ್ಕಾರದಿಂದ 5 ಲಕ್ಷ, ಭೈರತಿ ಬಸವರಾಜ್ ವೈಯಕ್ತಿಕವಾಗಿ 2 ಲಕ್ಷ, ತಾಂಡಾ ನಿಗಮದಿಂದ 1 ಲಕ್ಷದ ಚೆಕ್ ವಿತರಿಸಲಾಗಿದೆ.

ಸಾರಿಗೆ ಬಸ್ ನಿರ್ವಾಹಕನ ಬೇಜವಾಬ್ದಾರಿತನದಿಂದ ಬಸ್ ನಿಂದ ಬಿದ್ದು ಮೃತಪಟ್ಟಂತಹ ಯುವತಿಯ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದರು.

ಚಿಕ್ಕಮಗಳೂರಿನ ಬಸವನಹಳ್ಳಿ ಸರ್ಕಾರಿ ಪಿಯು ಕಾಲೇಜಿನಲ್ಲಿ ರಕ್ಷಿತಾ ವ್ಯಾಸಂಗ ಮಾಡುತ್ತಿದ್ದಳುಯುವತಿ ರಕ್ಷಿತಾ ಬಸ್​ನಿಂದ ಕೆಳಗೆ ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿತ್ತು. ಬಸ್ ಕಂಡಕ್ಟರ್ ನಿರ್ಲಕ್ಷ್ಯಕ್ಕೆ ಯುವತಿ ಬಲಿಯಾಗಿದ್ದಾಳೆ ಎಂಬ ಗಂಭೀರ ಆರೋಪ ಕೂಡ ಕೇಳಿಬಂದಿತ್ತು.

- Advertisement -
spot_img

Latest News

error: Content is protected !!