Saturday, June 6, 2026
Homeತಾಜಾ ಸುದ್ದಿಗೃಹ ರಕ್ಷಕ ದಳ ಸಿಬ್ಬಂದಿ ಕರ್ತವ್ಯ ಭತ್ಯೆ 600 ರೂಪಾಯಿಗೆ ಹೆಚ್ಚಿಸಿ ಸರ್ಕಾರ ಆದೇಶ

ಗೃಹ ರಕ್ಷಕ ದಳ ಸಿಬ್ಬಂದಿ ಕರ್ತವ್ಯ ಭತ್ಯೆ 600 ರೂಪಾಯಿಗೆ ಹೆಚ್ಚಿಸಿ ಸರ್ಕಾರ ಆದೇಶ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆಯನ್ನು ಹೊರತುಪಡಿಸಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 3025 ಗೃಹ ರಕ್ಷಕ ಸ್ವಯಂಸೇವಕರ ಭತ್ಯೆಯನ್ನು ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಸುಮಾರು 3025 ಗೃಹ ರಕ್ಷಕ ಹಾಗೂ ಪೌರ ರಕ್ಷಣಾ ಇಲಾಖೆಯ ಸ್ವಯಂ ಸೇವಕರಿಗೆ ನೀಡಲಾಗುತ್ತಿರುವ ದಿನ ಭತ್ಯೆಯನ್ನು 600 ರೂಪಾಯಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು ನಗರದಲ್ಲಿ 455 ರೂಪಾಯಿಯಿಂದ 600 ರೂಪಾಯಿ ಹಾಗೂ ರಾಜ್ಯದ ಇತರೆ ಭಾಗಗಳಲ್ಲಿ 380 ರೂಪಾಯಿಯಿಂದ 600 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ವರ್ಷದಲ್ಲಿ 353 ದಿನಗಳ ಕಾಲ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿರುವುದರಿಂದ ಬಹಳ ದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸಿದಂತಾಗಿದೆ.

- Advertisement -

Latest News

error: Content is protected !!