Thursday, June 4, 2026
Homeತಾಜಾ ಸುದ್ದಿಜು..1ರಿಂದ ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ 10 ಕೆಜಿ ಉಚಿತ ಅಕ್ಕಿ: ರಾಜ್ಯ ಸರ್ಕಾರದಿಂದ ಅಧಿಕೃತ...

ಜು..1ರಿಂದ ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ 10 ಕೆಜಿ ಉಚಿತ ಅಕ್ಕಿ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

- Advertisement -
- Advertisement -

ಬೆಂಗಳೂರು ; ಜು..1ರಿಂದ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ದಾರರಿಗೆ 10 ಕೆಜಿ ಉಚಿತ ಅಕ್ಕಿಯನ್ನು ವಿತರಣೆ ಮಾಡಲಾಗುತ್ತದೆ. ಈ ಬಗ್ಗೆ  ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಈ ಬಗ್ಗೆ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗಿರುವ ಅಂತ್ಯೋದಯ ಅನ್ನಯೋಜನೆ, ಆದ್ಯತಾ ಕುಟುಂಬ ಪಡಿತರ ಚೀಟಿಗಳು ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ವಿತರಿಸಲಾಗಿರುವ ಆದ್ಯತಾ ಪಡಿತರ ಚೀಟಿಗಳ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಆಹಾರ ಧಾನ್ಯವನ್ನು ದಿನಾಂಕ 01-07-2023ರಿಂದ ಅನ್ವಯವಾಗುವಂತೆ ಉಚಿತವಾಗಿ ವಿತರಿಸಲು ಆದೇಶಿಸಿದ್ದಾರೆ.

ಈ ಹಿನ್ನಲೆಯಲ್ಲಿ ದಿನಾಂಕ 01-07-2023ರ ಜುಲೈ ತಿಂಗಳಿನಿಂದ ಬಿಪಿಎಲ್, ಎಪಿಎಲ್ ಪಡಿತರ ಕಾರ್ಡ್ ದಾರರಿಗೆ ಇನ್ಮುಂದೆ 10 ಕೆಜಿ ಅಕ್ಕಿಯನ್ನು ಪ್ರತಿ ಸದಸ್ಯರಿಗೆ ಸರ್ಕಾರದಿಂದ ಉಚಿತವಾಗಿ ವಿತರಣೆ ಮಾಡಲಾಗುವುದು ಎಂದಿದ್ದಾರೆ.

- Advertisement -

Latest News

error: Content is protected !!