Saturday, April 20, 2024
Homeತಾಜಾ ಸುದ್ದಿರಾಜ್ಯದಲ್ಲಿ ನಿಲ್ಲದ ಕೊರೊನಾ ಆರ್ಭಟ: ಪಿಯುಸಿ, ಎಸ್ಸೆಸೆಲ್ಸಿ ಪರೀಕ್ಷೆ ಮುಂದೂಡಲು ಸರ್ಕಾರ ಚಿಂತನೆ

ರಾಜ್ಯದಲ್ಲಿ ನಿಲ್ಲದ ಕೊರೊನಾ ಆರ್ಭಟ: ಪಿಯುಸಿ, ಎಸ್ಸೆಸೆಲ್ಸಿ ಪರೀಕ್ಷೆ ಮುಂದೂಡಲು ಸರ್ಕಾರ ಚಿಂತನೆ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಸದ್ಯಕ್ಕೆ ನಿಲ್ಲುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ. ಹಾಗಾಗಿ ಎಸ್ಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ ಮುಂದೂಡಲು ಸರ್ಕಾರ ಚಿಂತನೆ ನಡೆಸಿದ್ದು, ಕೋವಿಡ್ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ದಿನಾಂಕ ಮರುನಿಗದಿ ಮಾಡುವ ಸಾಧ್ಯತೆ ಇದೆ.

ಮೇ 24 ರಿಂದ ಜೂನ್ 16 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ, ಜೂನ್ 21 ರಿಂದ ಜುಲೈ 5 ರವರೆಗೆ ಎಸ್ಸೆಸೆಎಲ್ಸಿ ಪರೀಕ್ಷೆ ನಡೆಸಲಾಗುವುದು. ಈಗಾಗಲೇ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಆದರೆ, ರಾಜ್ಯದಲ್ಲಿ ಕೊರೋನಾ ಸೋಂಕು ಭಾರಿ ಏರಿಕೆಯಾದ ಕಾರಣ ಪರೀಕ್ಷೆ ಮುಂದೂಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ರಾಜ್ಯದಲ್ಲಿ ಸುಮಾರು 8 ಲಕ್ಷ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳು, ಸುಮಾರು 5.5 ಲಕ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರ ಹಿತದೃಷ್ಟಿಯಿಂದ ವೇಳಾಪಟ್ಟಿ ಮರು ನಿಗದಿ ಮಾಡಬೇಕೆಂಬ ಅಭಿಪ್ರಾಯ ಕೇಳಿಬಂದಿದೆ. ಈ ನಿಟ್ಟಿನಲ್ಲಿ ಕೋವಿಡ್ ಸಮಿತಿಯೊಂದಿಗೆ ಚರ್ಚಿಸಿ ಪರೀಕ್ಷೆಗೆ ದಿನಾಂಕ ಮರು ನಿಗದಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

- Advertisement -
spot_img

Latest News

error: Content is protected !!