Sunday, May 12, 2024
Homeಕರಾವಳಿಉಡುಪಿಕಾಲೇಜು ಆರಂಭ: ಇನ್ನೆರಡು ದಿನದಲ್ಲಿ ಸರ್ಕಾರ ನಿರ್ಧಾರ

ಕಾಲೇಜು ಆರಂಭ: ಇನ್ನೆರಡು ದಿನದಲ್ಲಿ ಸರ್ಕಾರ ನಿರ್ಧಾರ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜು ಸೇರಿದಂತೆ ಉನ್ನತ ಶಿಕ್ಷಣದ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರ ಇನ್ನು ಎರಡು ದಿನಗಳಲ್ಲಿ ನಿರ್ಧಾರ ಮಾಡಲಿದೆ. ಬೆಂಗಳೂರಿನಲ್ಲಿ ಇಂದು ಉಪಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ.‌ ಕಾಲೇಜು ಆರಂಭವಾದರೂ ವಿದ್ಯಾರ್ಥಿಗಳಿಗೆ ಆಫ್ ಲೈನ್‌ ಕ್ಲಾಸ್‌ ಕಡ್ಡಾಯ ಅಲ್ಲ. ತರಗತಿಗಳಿಗೆ ಹಾಜರಾಗಲು ಇಷ್ಟ ಇದ್ದವರು ಲಸಿಕೆ ಪಡೆದು ಬರಬಹುದು, ಇಲ್ಲದವರು ಆನ್‌ಲೈನ್‌ ಕ್ಲಾಸ್‌ನಲ್ಲಿ ಪಾಠ ಕೇಳಬಹುದು. ಆದರೆ ಆಫ್ ಲೈನ್ ಅಥವಾ ಆನ್ ಲೈನ್ ನಲ್ಲಿ ಹಾಜರಿ ಮಾತ್ರ ಕಡ್ಡಾಯವಾಗಲಿದೆ.

ಮೇ ತಿಂಗಳಿಂದಲೇ ಆನ್‌ಲೈನ್ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಜತೆಗೆ ಸಂಪರ್ಕ ತರಗತಿಗಳೂ ನಡೆಯುತ್ತಿವೆ. ಅಗಸ್ಟ್‌ ೧೫ರಿಂದ ಬರುವ ವಿದ್ಯಾರ್ಥಿಗಳಿಗೂ ಸಂಪರ್ಕ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಲಾಗುವುದು ಎಂದು ಸಭೆಯ ನಂತರ ಡಿಸಿಎಂ ಡಾ. ಅಶ್ವಥ್ ನಾರಾಯಣ ಮಾಹಿತಿ ನೀಡಿದ್ದಾರೆ.

- Advertisement -
spot_img

Latest News

error: Content is protected !!