Friday, June 5, 2026
Homeತಾಜಾ ಸುದ್ದಿಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಪಿ.ಡಿ.ಓಗೆ ಮುತ್ತುಕೊಟ್ಟ ಗ್ರಾ.ಪಂ.ಸದಸ್ಯ : ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಗ್ರಾ.ಪಂ. ಸದಸ್ಯನ...

ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಪಿ.ಡಿ.ಓಗೆ ಮುತ್ತುಕೊಟ್ಟ ಗ್ರಾ.ಪಂ.ಸದಸ್ಯ : ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಗ್ರಾ.ಪಂ. ಸದಸ್ಯನ ಸಾಧನೆ

- Advertisement -
- Advertisement -

ತುಮಕೂರು: ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಸದಸ್ಯನೊಬ್ಬ ಪಿಡಿಒಗೆ ಮುತ್ತು ಕೊಟ್ಟಿರುವ ಘಟನೆ  ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರ ಗ್ರಾ.ಪಂ. ಕಚೇರಿಯಲ್ಲಿ ನಡೆದಿದೆ. ಗ್ರಾ.ಪಂ. ಸದಸ್ಯ ಮುತ್ತು ಕೊಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  

ಗ್ರಾಮ ಪಂಚಾಯಿತಿ ಸದಸ್ಯ ಪ್ರಸನ್ನ, ಪಿಡಿಒ ಕೋಕಿಲಾ ಅವರಿಗೆ ಕಚೇರಿಯಲ್ಲೇ ಕೈ ಹಿಡಿದು ಚುಂಬಿಸಿದ್ದಾರೆ. ಮತ್ತೊಂದು ದೃಶ್ಯದಲ್ಲಿ ಪಿಡಿಒ ಅವರ ಕೈ ಹಿಡಿದುಕೊಂಡು ಬಲವಂತವಾಗಿ ಎಳೆದಾಡಿ ಮುತ್ತುಕೊಟ್ಟಿದ್ದಾನೆ. ಕೆಲ ದಿನಗಳ ಹಿಂದೆ ಘಟನೆ ನಡೆದಿದ್ದು ತಡಗಿ ಬೆಳಕಿಗೆ ಬಂದಿದೆ. ಸದ್ಯ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗುತ್ತಿದೆ.

- Advertisement -

Latest News

error: Content is protected !!